
ಮಧ್ಯಪ್ರದೇಶದ (Madhya Pradesh) ಸಿಂಗ್ರೌಲಿಯಲ್ಲಿ 20 ವರ್ಷದ ಆರ್ಕೆಸ್ಟ್ರಾ ಡ್ಯಾನ್ಸರ್ (orchestra dancer) ಮೇಲೆ ನಡೆದ ಸಾಮೂಹಿಕ ಅತ್ಯಾಚಾರ (Gang rape) ಆತಂಕ ಮೂಡಿಸಿದೆ. ತಡರಾತ್ರಿ ಪ್ರದರ್ಶನ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ, 6 ಮಂದಿ ದುಷ್ಕರ್ಮಿಗಳು ಆಕೆಯನ್ನು ತಡೆದು, ಆಕೆಯ ಪ್ರಿಯಕರನ ಮೇಲೆ ಹಲ್ಲೆ ಮಾಡಿ ಹತ್ತಿರದ ಕಾಡಿಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ, ಎಲ್ಲ 6 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಬುಧವಾರ ಮತ್ತು ಗುರುವಾರರಾತ್ರಿ ಮಾಡಾ ಪೊಲೀಸ್ ಠಾಣೆ ವ್ಯಾಪ್ತಿಯ ಶೀತುಲ್ ಗ್ರಾಮದಲ್ಲಿ ನಡೆದಿದೆ.
ಮಹಿಳೆ ತನ್ನ ಸಹೋದರಿ ಹಾಗೂ ಆರ್ಕೆಸ್ಟ್ರಾದ ಇತರ ಸದಸ್ಯರೊಂದಿಗೆ ಡ್ಯಾನ್ಸ್ ಶೋ ಕೊಟ್ಟು ಮನೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಆಕೆಯ ಪ್ರಿಯಕರ ಪ್ರತಿರೋಧ ತೋರಿದಾಗ, ಅವನನ್ನು ಥಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅತ್ಯಾಚಾರದಿಂದ ಆಘಾತಕ್ಕೊಳಗಾದ ಮಹಿಳೆ ತಕ್ಷಣವೇ ತನ್ನ ಅಕ್ಕನಿಗೆ ವಿಷಯ ತಿಳಿಸಿ, ಇಬ್ಬರೂ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ತಕ್ಷಣ ಕ್ರಮ ತೆಗೆದುಕೊಂಡು, ವೈದ್ಯಕೀಯ ಪರೀಕ್ಷೆ ನಡೆಸಿ, 6 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಸ್ತುತ ವಿಚಾರಣೆ ಮುಂದುವರಿಯುತ್ತಿದೆ.