
Gauribidanur : ಗೌರಿಬಿದನೂರು ತಾಲ್ಲೂಕಿನ ಡಿ.ಪಾಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಅಂಬೇಡ್ಕರ್ ಓದು’ (Ambedkar Odhu) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮನಿಷಾ “ಸಂವಿಧಾನಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ತತ್ವ ಚಿಂತನೆಗಳನ್ನು ವಿದ್ಯಾರ್ಥಿಗಳು, ಯುವಜನರು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಸಮಾಜದ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು. ಸಾವಿರಾರು ವರ್ಷಗಳಿಂದ ಭಾರತೀಯ ನೆಲದಲ್ಲಿದ್ದ ಜಾತಿ ಪದ್ಧತಿ ಮತ್ತು ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡಲು ಅಂಬೇಡ್ಕರ್ ಶ್ರಮಿಸಿದರು. ಭಾರತದ ಸಾಮಾಜಿಕ ಬದಲಾವಣೆ ಮತ್ತು ಅಭಿವೃದ್ಧಿಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಗರಿಷ್ಠವಾಗಿದೆ” ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸತ್ಯೇಂದ್ರ, ಉಪನ್ಯಾಸಕರಾದ ಎನ್.ಚಂದ್ರಶೇಖರ್, ನಾಗರಾಜ್, ಇಂದ್ರಾಣಿ ಮತ್ತು ಚಿನ್ನಪ್ಪರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಸರ್ಕಾರಿ ಕಾಲೇಜಿನಲ್ಲಿ ‘ಅಂಬೇಡ್ಕರ್ ಓದು’ appeared first on Chikkaballapur.