Gauribidanur : ಗೌರಿಬಿದನೂರು ನಗರದ ಆಂಜನೇಯ ಸ್ವಾಮಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ BJP ವಿಶೇಷ ಕಾರ್ಯಕಾರಿಣಿ ಸಮಿತಿ ಸಭೆಯನ್ನು (Executive Committee Meeting) ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಎನ್.ಎಂ. ರವಿನಾರಾಯಣರೆಡ್ಡಿ “ನಮ್ಮ ಪಕ್ಷದ ಕಾರ್ಯಕರ್ತರು ಮಾಡುವ ಜನಪರ ಕಾರ್ಯಕ್ರಮಗಳನ್ನು ನೋಡಿ ವಿರೋಧ ಪಕ್ಷದವರಿಗೆ ಭಯ ಶುರುವಾಗಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ನಮ್ಮ ತಾಲ್ಲೂಕಿನಿಂದ ಹೆಚ್ಚಿನ ಮತಗಳನ್ನು ನೀಡಿದ್ದಂತೆ ಮುಂದೆಯೂ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ತರುವ ಮೂಲಕ ತಾಲ್ಲೂಕಿನಲ್ಲಿ ಬಿಜೆಪಿ ಪಕ್ಷವನ್ನು ಭದ್ರಗೊಳಿಸಬೇಕು” ಎಂದು ಹೇಳಿದರು.
ನಗರ ಮಂಡಲದ ಅಧ್ಯಕ್ಷ ಮಾರ್ಕೆಟ್ ಮೋಹನ್, ಚ್.ಎಸ್ ಮುರಳಿಧರ್, ಡಾ. ಶಶಿಧರ್, ನಾಗಭೂಷಣ್ ರಾವ್, ಮಧು ಸೂರ್ಯನಾರಾಯಣ, ಚೈತ್ರ, ಕೋಡಿರ್ಲಪ್ಪ, ಹರೀಶ್ ಜಯಣ್ಣ, ವೇಣು ಮಾಧವ, ರಮೇಶ್, ಸೋಮಣ್ಣ, ಶ್ರೀನಿವಾಸ ಗೌಡ ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post BJP ವಿಶೇಷ ಕಾರ್ಯಕಾರಿಣಿ ಸಮಿತಿ ಸಭೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.