Gauribidanur : ಗೌರಿಬಿದನೂರು ನಗರದ ಎಚ್.ಎನ್ ಕಲಾ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಮಂಗಳವಾರ ಜಿಲ್ಲಾಧಿಕಾರಿ (Deputy Commissioner P N Ravindra) ಪಿ.ಎನ್.ರವೀಂದ್ರರವರ ಜನತಾ ದರ್ಶನ (Janatha Darshana) ಆಯೋಜಿಸಲಾಗಿತ್ತು.
ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಜಿಲ್ಲಾಡಳಿತ ಜನರ ಬಳಿ ಬಂದು ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು ಸ್ಥಳೀಯ ನಾಗರಿಕರು ನೀಡುವ ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದೆ. ಉಳಿದ ಅರ್ಜಿಗಳನ್ನು ಆದ್ಯತೆ ಮೇರೆಗೆ ಇಲಾಖಾವಾರು ಸಮಗ್ರವಾಗಿ ಪರಿಶೀಲಿಸಿ ಪರಿಹಾರಕ್ಕೆ ಸೂಚಿಸಲಾಗುವುದು. ಒಟ್ಟು 152 ಅರ್ಜಿಗಳು ಜನತಾ ದರ್ಶನದಲ್ಲಿ ಬಂದಿದ್ದು, ಈ ಪೈಕಿ 66 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿವೆ. 13 ಅರ್ಜಿಗಳು ಗ್ರಾಮೀಣ ಅಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟಿವೆ. ಬಹುತೇಕ ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾಯಿತು. ಉಳಿದ ಅರ್ಜಿಗಳನ್ನು 15 ದಿನಗಳ ಕಾಲಮಿತಿಯಲ್ಲಿ ಪರಿಹರಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು. ಈ ವೇಳೆ ನಗರಸಭೆ ಸದಸ್ಯರು, ನಗರಸಭೆ ಅವ್ಯವಸ್ಥೆ ಸರಿಪಡಿಸಿ ಜನರಿಗೆ ಅಗತ್ಯ ಸೌಲಭ್ಯ ಒದಗಿಸಲು ಸೂಕ್ತ ಕ್ರಮವಹಿಸಿ ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್.ಜಿ.ಟಿ ನಿಟ್ಟಾಲಿ, ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ತಾ.ಪಂ.ಇಒ ಆರ್.ಹರೀಶ್, ನಗರಸಭೆ ಆಯುಕ್ತೆ ಡಿ.ಎಂ.ಗೀತಾ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ appeared first on Chikkaballapur.