
Gauribidanur : ಗೌರಿಬಿದನೂರು ತಾಲ್ಲೂಕಿನ ಮಳೆಯಿಂದ ಹಾನಿಗೊಳಗಾದ (Rain Damage Areas) ಕಾದಲವೇಣಿ, ಹೊಸೂರು, ಕಾಚಮಾಚೇನಹಳ್ಳಿ ಗ್ರಾಮಗಳಿಗೆ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (K. H. Puttaswamy Gowda) ಭೇಟಿ (Visit) ನೀಡಿದರು.
ಈ ಸಂಧರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಶಾಸಕರು “ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಹಲವು ಗ್ರಾಮಗಳಲ್ಲಿ ಸುಮಾರು 46 ಮನೆಗಳು ಹಾನಿಗೊಳಗಾಗಿವೆ. ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬಹುದಾದ ನಷ್ಟ ಪರಿಹಾರವನ್ನು ಶೀಘ್ರವಾಗಿ ಮಂಜೂರು ಮಾಡಿಸಲಾಗುವುದು” ಎಂದು ತಿಳಿಸಿದರು.
ತಹಶೀಲ್ದಾರ್ ಮಹೇಶ್ ಪತ್ರಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ, ಸಹಾಯಕ ಕೃಷಿ ನಿರ್ದೇಶಕ ಮೋಹನ್, ವೃತ್ತ ನಿರೀಕ್ಷಕ ಕೆ.ಪಿ. ಸತ್ಯನಾರಾಯಣ್, ರವಿಕುಮಾರ್, ಅಮರ್ ನಾರಾಯಣ್ ಮುಖಂಡರಾದ ಎಂ.ನರಸಿಂಹಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಮಳೆ ಹಾನಿ ಪ್ರದೇಶಕ್ಕೆ ಶಾಸಕರ ಭೇಟಿ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.