Gauribidanur : ಮಂಚೇನಹಳ್ಳಿ ತಾಲ್ಲೂಕಿನ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್ಕುಂದ (Arkunda) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ (Government Lower Primary School) ಬುಧವಾರ ಗೌರೀಬಿದನೂರು ತಹಶೀಲ್ದಾರ್ ಮಹೇಶ್ ಎಸ್.ಪತ್ರಿ ದಿಢೀರ್ (Tehsildar Mahesh S Patri) ಭೇಟಿ (Visit) ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು. ಶಾಲಾ ಆವರಣದ ಪರಿಸರ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ ತಹಶೀಲ್ದಾರರು ನಲಿ–ಕಲಿ ಚಟುವಟಿಕೆಯಲ್ಲಿ ನಿರತರಾಗಿದ್ದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕ್ರಿಯಾಶೀಲತೆ ಕಂಡು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್ ಮಹೇಶ್ ಎಸ್.ಪತ್ರಿ ” ಬಡ ಮತ್ತು ಮಧ್ಯಮ ವರ್ಗದ ಪೋಷಕರಿಗೆ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರಿ ಶಾಲೆಗಳೇ ನಿಜವಾದ ದೇವಾಲಯಗಳು. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕಾಗಿದೆ. ಉತ್ತಮ ಪ್ರತಿಭಾವಂತ ಶಿಕ್ಷಕರಿರುವ ಸರ್ಕಾರಿ ಶಾಲೆಗಳಲ್ಲಿ ಆಟ, ಊಟ, ಪಾಠ, ಸಮವಸ್ತ್ರ ಎಲ್ಲವೂ ಸಿಗಲಿದೆ” ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಕೋಮಲ, ಸಹಶಿಕ್ಷಕರಾದ ಚಾಂದ್ ಬಾಷ, ಕಂದಾಯ ಅಧಿಕಾರಿಗಳಾದ ಮುಲ್ಲಾಸಾಬ್, ಬಾಬಾಜಾನ್, ರವಿ ಮತ್ತಿತರರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಹಶೀಲ್ದಾರ್ ದಿಢೀರ್ ಭೇಟಿ appeared first on Chikkaballapur.