back to top
23.3 C
Bengaluru
Monday, July 14, 2025
HomeChikkaballapuraGauribidanurಗೌರಿಬಿದನೂರು: ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಆರಂಭ

ಗೌರಿಬಿದನೂರು: ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಆರಂಭ

- Advertisement -
- Advertisement -

Gauribidanur : ಗೌರಿಬಿದನೂರು ನಗರದಿಂದ ಚಿಕ್ಕಬಳ್ಳಾಪುರ ಮಾರ್ಗದಲ್ಲಿರುವ ಉತ್ತರ ಪಿನಾಕಿನಿ ನದಿ ಸೇತುವೆಯ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ, ಶುಕ್ರವಾರದಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಸೇತುವೆಯನ್ನು 8 ಕೋಟಿ ರೂಪಾಯಿ ವೆಚ್ಚದಲ್ಲಿ 16 ಮೀಟರ್ ಅಗಲದ ಹೊಸ ಸೇತುವೆಯಾಗಿ ನವೀಕರಿಸುವ ಯೋಜನೆ ರೂಪಿಸಲಾಗಿದೆ. ಹಾಲಿ 8 ಮೀಟರ್ ಅಗಲದ ಹಳೆಯ ಸೇತುವೆಯನ್ನು ತೆರವುಗೊಳಿಸುವ ಕಾರ್ಯ ಮಳೆಗಾಲದ ಬಳಿಕ ಪುನಾರಂಭವಾಗಿದೆ.

ಈ ಹಿನ್ನಲೆಯಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಂತಹ ಲಘು ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಅವಕಾಶ ನೀಡಲಾಗಿದೆ. ಭಾರಿ ವಾಹನಗಳಿಗೆ ಬೈಪಾಸ್ ರಸ್ತೆಯ ಮೂಲಕ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬದಲಿ ಮಾರ್ಗಗಳಲ್ಲಿ ಸಂಚರಿಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿದೆ.

For Daily Updates WhatsApp ‘HI’ to 7406303366

The post ಗೌರಿಬಿದನೂರು: ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಆರಂಭ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page