Home Chikkaballapura Gauribidanur ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಪಾಠ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಪಾಠ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

25

Gauribidanur : ಗೌರಿಬಿದನೂರು ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ವೀರಶೈವ ಲಿಂಗಾಯತ (Veerashaiva Lingayat) ವಿದ್ಯಾರ್ಥಿ ನಿಲಯದ ಹಿರಿಯ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ಮತ್ತು ವೀರಶೈವ ಸೇವಾ ಸಮಿತಿ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Pratibha Puraskara) ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟನೆ ಮಾಡಿದ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, “ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಭವಿಷ್ಯ ಗುರಿಯಾಗುತ್ತದೆ. ಗುರಿ ಹಾಗೂ ಛಲದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ಹೊಂದಿದರೆ ಸಾಧನೆ ಸುಲಭ ಯುವಕರು ಧರ್ಮ, ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾ ಯುವ ಘಟಕದ ನಿರ್ದೇಶಕ ಜಿ. ರಾಜಣ್ಣ ಅವರನ್ನು ಸನ್ಮಾನಿಸಲಾಯಿತು.

ಟ್ರಸ್ಟ್ ಅಧ್ಯಕ್ಷ ಕೆ.ಸಿ. ವಿಶ್ವೇಶ್ವರಯ್ಯ, ನಿವೃತ್ತ ಪ್ರಾಂಶುಪಾಲೆ ಡಾ. ಸಿ. ನಾಗರತ್ನ, ಅಧ್ಯಕ್ಷ ಜಿ.ಆರ್. ನವೀನ್, ಉಪಾಧ್ಯಕ್ಷ ಕೆ.ಎಂ. ಶಿವಪ್ರಸಾದ್, ಶಶಿಧರ್, ನಟರಾಜ್ ಮತ್ತು ನಿರ್ದೇಶಕರಾದ ಸೋಮನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

The post ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಪಾಠ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page