Chikkaballapur : ಮಂಗಳವಾರ ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದ ಮುಂಭಾಗದಿಂದ ಕೆಲಸ ಕಾಯಂಗೊಳಿಸುವಂತೆ ಪ್ರತಿಭಟನಾ ರ‍್ಯಾಲಿ ಆರಂಭಿಸಿದ ಅತಿಥಿ ಉಪನ್ಯಾಸಕರಿಗೆ ದಲಿತ ಸಂಘರ್ಷ ಸಮಿತಿ, ಶಾಶ್ವತ ನೀರಾವರಿ ಹೋರಾಟ ಸಮಿತಿ, ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು (Guest Lecturers Protest). ಪ್ರತಿಭಟನಾಕಾರರು ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿದರು. ಜಿಲ್ಲಾಡಳಿತ ಭವನದ ಮುಂಭಾಗ ಧರಣಿ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನುಮಂತಗೌಡ ಕಲ್ಮನಿ “ಸರ್ಕಾರ ಕಾಯಂ ಬಗ್ಗೆ ಗೆಜೆಟ್ ಆದೇಶದ ಪ್ರತಿ ನೀಡದ ಹೊರತು ತರಗತಿಗಳಿಗೆ ಮರಳುವುದಿಲ್ಲ. ಶೇ 99ರಷ್ಟು ಅತಿಥಿ ಉಪನ್ಯಾಸಕರು ಹೋರಾಟ ಬೆಂಬಲಿಸಿ ತರಗತಿಗಳಿಂದ ಹೊರಗೆ ಉಳಿದಿದ್ದಾರೆ. ಇದು ಮಾಡು ಇಲ್ಲವೆ ಮಡಿ ಹೋರಾಟವಾಗಿದೆ” ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಮುನಿರಾಜು, ಗೌರವಾಧ್ಯಕ್ಷ ರಮಾನಂದ, ಬಿ. ಸದಾಶಿವ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಖಜಾಂಚಿ ರಾಜಶೇಖರ್, ಕಾರ್ಯಾಧ್ಯಕ್ಷ ವೆಂಕಟರಮಣ, ಉಪಾಧ್ಯಕ್ಷ ಮಂಜುನಾಥ್, ದೇವರಾಜು, ಸಹಕಾರ್ಯದರ್ಶಿ ಮಾಲಿನಿ, ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ, ಗಂಗಾಧರ್, ರಾಮಾಂಜಿನಪ್ಪ, ಗಿರೀಶ್, ಗಂಗಪ್ಪ, ಓಬಳರೆಡ್ಡಿ ಆದಿನಾರಾಯಣಪ್ಪ, ಹರೀಶ್, ಸಾದತ್, ರಾಮಚಂದ್ರ, ವಿನೋದಮ್ಮ ಮತ್ತಿತರರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಕೆಲಸ ಕಾಯಂಗೊಳಿಸುವಂತೆ ಅತಿಥಿ ಉಪನ್ಯಾಸಕರ ಪ್ರತಿಭಟನೆ appeared first on Chikkaballapur.