ಭಾರತದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ (Indian Cricket Spinner Harbhajan Singh) ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಆಟಕ್ಕೆ ನಿವೃತ್ತಿ (Retirement) ಘೋಷಿಸಿದ್ದಾರೆ. 2007 ರ T20 ವಿಶ್ವಕಪ್ ಮತ್ತು 2011 ODI ವಿಶ್ವಕಪ್ ವಿಜೇತ ಭಾರತ ತಂಡದ ಭಾಗಿಯಾಗಿದ್ದ ಹರ್ಭಜನ್, ತಮ್ಮ ಸಾಮಾಜಿಕ ಮಾಧ್ಯಮ ಖಾತೆ Twitter ನಲ್ಲಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಭಾರತಕ್ಕಾಗಿ ಕೊನೆಯದಾಗಿ 03 ಮಾರ್ಚ್ 2016 ರಂದು UAE ವಿರುದ್ಧ T20 ವಿಶ್ವಕಪ್‌ನಲ್ಲಿ ಹರ್ಭಜನ್ ಸಿಂಗ್ ಆಡಿದ್ದರು. ಜೊತೆಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿ ಕಳೆದ ವರ್ಷ ಕೋಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡಿದ್ದರು.
Cricket ಗೆ ನಿವೃತ್ತಿ ಘೋಷಿಸಿದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್
RELATED ARTICLES