Haryana: ಹರ್ಯಾಣದ (Haryana) ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ (Nayab Singh Saini) ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, (Prime Minister Narendra Modi) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಭಾರತೀಯ ಜನತಾ ಪಕ್ಷದ (BJP) ಉನ್ನತ ನಾಯಕತ್ವ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಹರ್ಯಾಣದಲ್ಲಿ ಮೂರನೇ ಬಾರಿಗೆ BJP ಸರ್ಕಾರ ರಚನೆಯಾಗಲಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಆಯ್ಕೆಯಾದರು.
ಈ ಸಂದರ್ಭದಲ್ಲಿ ವೀಕ್ಷಕರಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಉಪಸ್ಥಿತರಿದ್ದರು.
ಇದಾದ ನಂತರ ನಯಾಬ್ ಸಿಂಗ್ ಸೈನಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಪಂಚಕುಲದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮಧ್ಯಾಹ್ನ 1.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ವಿಐಪಿಗಳ ಆಗಮನ ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದೆ.
ಮೂಲಗಳ ಪ್ರಕಾರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಗೋವಾ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಒಡಿಶಾ, ಪುದುಚೇರಿ (UT), ರಾಜಸ್ಥಾನ, ಸಿಕ್ಕಿಂ, ತ್ರಿಪುರಾ, ಉತ್ತರ ಪ್ರದೇಶ ಮುಖ್ಯಮಂತ್ರಿಗಳು ಮತ್ತು ಉತ್ತರಾಖಂಡ ಅವರು ಸಮಾರಂಭದಲ್ಲಿ ಭಾಗವಹಿಸಬಹುದು.