Hassan: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತ ಮತ್ತು ಹಾಸನ ಜಿಲ್ಲೆಯ ಪ್ರಮುಖ ಜೆಡಿಎಸ್ ನಾಯಕ, ಮಾಜಿ ಎಂಎಲ್ಸಿ ಪಟೇಲ್ ಶಿವರಾಂ (Senior JDS leader Patel Shivaram) (75) ಗುರುವಾರ ಬೆಳಿಗ್ಗೆ ನಿಧನರಾದರು. ಹಾಸನ ನಗರದಲ್ಲಿನ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಪಟೇಲ್ ಶಿವರಾಂ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.
ಪಟೇಲ್ ಶಿವರಾಂ 2010 ರಿಂದ 2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಹೆಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸಿದ್ದರು.
ಸುಮಾರು 4 ದಶಕಗಳ ಕಾಲ ಜೆಡಿಎಸ್ ಪಕ್ಷದಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದ ಪಟೇಲ್ ಶಿವರಾಂ ಅವರ ನಿಧನಕ್ಕೆ ಜೆಡಿಎಸ್ ಮುಖಂಡರು ದುಃಖ ವ್ಯಕ್ತಪಡಿಸಿದ್ದಾರೆ.
“ಪಟೇಲ್ ಶಿವರಾಂ ಅವರ ನಿಧನವು ಅತೀವ ದುಃಖಕರ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತಾ, ಅವರ ಕುಟುಂಬದವರಿಗೆ ನನ್ನ ಸಂತಾಪ ಸಲ್ಲಿಸುತ್ತೇನೆ,” ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಟ್ವೀಟ್ ಮೂಲಕ ಸಂತಾಪ ಸೂಚಿಸಿದರು.