back to top
19.4 C
Bengaluru
Saturday, July 19, 2025
HomeKarnatakaHD Kumaraswamy ವಿರುದ್ಧ ಭೂ ಕಬಳಿಕೆ ಆರೋಪ: SIT ತನಿಖೆ

HD Kumaraswamy ವಿರುದ್ಧ ಭೂ ಕಬಳಿಕೆ ಆರೋಪ: SIT ತನಿಖೆ

- Advertisement -
- Advertisement -

Bengaluru: ಕೇಂದ್ರ ಸಚಿವ HD ಕುಮಾರಸ್ವಾಮಿ (HD Kumaraswamy) ಮತ್ತು ಅವರ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪದ ಮೇಲೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಹಿರಿಯ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸಲಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಅಡಿಯಲ್ಲಿ ಈ ಎಸ್ಐಟಿ ರಚನೆ ಮಾಡಲಾಗಿದೆ. ಈ ತಂಡದಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸ್ಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಇಸ್ಲಾವುದ್ದೀ ಗದ್ಯಾಳ, (Islawudi Gadyal) ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಇದ್ದಾರೆ.

ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್ಆರ್ ಹಿರೇಮಠ ಅವರು HD ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರು ಕೇತಗಾನಹಳ್ಳಿಯಲ್ಲಿ ಸರ್ವೆ ನಂ. 8, 9, 10, 16, 17 ಮತ್ತು 79ರಲ್ಲಿನ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಸರ್ಕಾರದ ವಿರುದ್ಧ ನಿಂದನೆ ಅರ್ಜಿ ದಾಖಲಿಸಿಕೊಂಡಿತ್ತು.

ಈ ಪ್ರಕರಣದ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡುತ್ತಾ, “ಹೈಕೋರ್ಟ್ ಸೂಚನೆಯ ಮೇರೆಗೆ ತನಿಖಾ ತಂಡವನ್ನು ರಚಿಸಲಾಗಿದೆ. ನ್ಯಾಯಾಲಯದ ಆದೇಶವನ್ನು ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೈಕೋರ್ಟ್ ನೀಡಿದ ಗಡುವಿನೊಳಗೆ ಸಮಿತಿ ತನ್ನ ವರದಿ ಸಲ್ಲಿಸುತ್ತದೆ” ಎಂದು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page