Home Karnataka HD Kumaraswamy ಜಾಮೀನು ರದ್ದು ಕೋರಿ ಅರ್ಜಿ

HD Kumaraswamy ಜಾಮೀನು ರದ್ದು ಕೋರಿ ಅರ್ಜಿ

112
HD Kumaraswamy

Bengaluru: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ (Sri Sai Venkateswara Minerals) ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ HD ಕುಮಾರಸ್ವಾಮಿ (HD Kumaraswamy) ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಕರ್ನಾಟಕ ಲೋಕಾಯುಕ್ತದ (Karnataka Lokayukta) SIT ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಐಪಿಎಸ್ ಅಧಿಕಾರಿ ವಿರುದ್ಧ ವಿರುದ್ಧ ಸಿಎಸ್ಗೆ JDLP ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ JDS ದೂರು ನೀಡಿದ್ದು, ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಎಚ್ಡಿಕೆಗೆ ಅಪಮಾನ ಮಾಡಲಾಗಿದೆ ಅಂತ ದೂರು ನೀಡಿದ್ದಾರೆ. ಇನ್ನು, ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಮಾಜಿ ಸಚಿವ ಸಾರಾ ಮಹೇಶ್ ಕೂಡ ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿದ್ದಾರೆ.

ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿತು. ಪ್ರಕರಣದ ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣದ ಸಂಬಂಧಿಸಿದ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಎಸ್ಐಟಿಯ ಉಸ್ತುವಾರಿಯಾಗಿರುವ ಎಡಿಜಿಪಿ ಎಂ ಚಂದ್ರಶೇಖರ್ ವಿರುದ್ಧ ಮಾಜಿ ಸಿಎಂ ಇತ್ತೀಚೆಗೆ ಹಲವು ಆರೋಪಗಳನ್ನು ಮಾಡಿದ್ದರು. ನವೆಂಬರ್ 21, 2023 ರಂದು ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಎಸ್ಐಟಿ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ರಾಜ್ಯಪಾಲರು ಜುಲೈ 29, 2024 ರಂದು ವರದಿಯನ್ನು ಪರಿಶೀಲಿಸಿದ ನಂತರ ಕೆಲವು ಸ್ಪಷ್ಟನೆಗಳನ್ನು ಕೇಳಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page