Begnaluru: ಬೆಂಗಳೂರಿನಲ್ಲಿ ಇಂದು ಮತ್ತೆ ಧಾರಾಕಾರವಾಗಿ ಮಳೆ (Heavy rain) ಸುರಿಯಲಾರಂಭಿಸಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಜೋರಾಗಿದ್ದು ನಿರಂತರ ಮಳೆ ಸಿಲಿಕಾನ್ ಸಿಟಿಯನ್ನು (Silicon City) ತಂಪಾಗಿಸಿದೆ.
ಅಕ್ಟೋಬರ್ ತಿಂಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು ಹಬ್ಬದ ತಯಾರಿಯಲ್ಲಿರುವ ಜನರಿಗೆ ಹಾಗೂ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಮಾರಾಟಗಾರರಿಗೆ ಅಡ್ಡಿಯಾಗಿದೆ. ಪೂಜಾ ಸಾಮಾಗ್ರಿಗಳು, ಅಲಂಕಾರಿಕ ವಸ್ತುಗಳು ಹಾಗೂ ಹೂವು ಹಣ್ಣು ವ್ಯಾಪಾರ ಮಾಡುವ ವ್ಯಾಪಾರಿಗಳಿಗೂ ಇದರಿಂದ ಸಾಕಷ್ಟು ತೊಂದರೆಯಾಗಿದೆ.
ಮುಂದಿನ ಐದು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡಿಗೆ ಸೀಮಿತವಾಗಿದ್ದ ಮಳೆ ಅಬ್ಬರ ಇದೀಗ ಒಳನಾಡು ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ.
ರಾಜ್ಯದಲ್ಲಿ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನಾಪೋಕ್ಲು, ಬಂಡೀಪುರ, ಕಾರ್ಕಳ, ನರಗುಂದ, ರಾಮನಗರ, ಮಸ್ಕಿ, ಕನಕಪುರ, ಮಾಗಡಿ, ಎಚ್ಡಿ ಕೋಟೆ, ಮುಂಡಗೋಡು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ಕುಮಟಾ, ಲಕ್ಷ್ಮೇಶ್ವರ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ತ್ಯಾಗರ್ತಿ, ಪೊನ್ನಂಪೇಟೆ, ಹೊನ್ನಾಳಿ, ಮೈಸೂರಿನಲ್ಲಿ ಮಳೆಯಾಗಿದೆ.