back to top
20.9 C
Bengaluru
Tuesday, November 25, 2025
HomeIndiaಉತ್ತರಾಖಂಡದ Uttarkashi ಯಲ್ಲಿ ಹೆಲಿಕಾಪ್ಟರ್ ಪತನ – 5 ಮಂದಿ ದುರ್ಮರಣ

ಉತ್ತರಾಖಂಡದ Uttarkashi ಯಲ್ಲಿ ಹೆಲಿಕಾಪ್ಟರ್ ಪತನ – 5 ಮಂದಿ ದುರ್ಮರಣ

- Advertisement -
- Advertisement -

Uttarkashi: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಹೆಲಿಕಾಪ್ಟರ್ ಪತನ (helicopter crashed) ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 5 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಒಟ್ಟು 7 ಜನರಿದ್ದರು ಎನ್ನಲಾಗಿದ್ದು, ಅವರಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಹೆಲಿಕಾಪ್ಟರ್ ಡೆಹ್ರಾಡೂನ್ ನಿಂದ ಹರ್ಸಿಲ್ ಹೆಲಿಪ್ಯಾಡ್ ಕಡೆಗೆ ಹೋಗುತ್ತಿತ್ತು. ಆಗ ದುರಂತ ಸಂಭವಿಸಿದೆ. ಘಟನೆಯ ಸುದ್ದಿ ತಿಳಿದ ತಕ್ಷಣ ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ದಳ (SDRF) ಹಾಗೂ ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಚರಣೆ ನಡೆಸಿದವು.

ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ಈ ಘಟನೆ ನಡೆದಿದೆ ಎಂಬುದನ್ನು ದೃಢಪಡಿಸಿದ್ದಾರೆ. ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ‘ಎಎನ್ಐ’ ತಿಳಿಸಿದೆ.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಈ ದುರ್ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಗಳಿಗೆ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಮತ್ತು ಅಪಘಾತದ ನಿಖರ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಚಾರ್ ಧಾಮ್ ಯಾತ್ರೆ ಆರಂಭದ ಕೆಲವೇ ದಿನಗಳಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page