Bengaluru: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ (High Court) ಮೆಟ್ಟಿಲೇರಿದ್ದ JDS ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಹಿನ್ನೆಡೆಯಾಗಿದೆ.
ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail Plea) ಇಂದು (ಅಕ್ಟೋಬರ್ 21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಒಂದಲ್ಲ ಎರಡಲ್ಲ ನಾಲ್ಕು ಕೇಸ್ಗಳ ಪೈಕಿ ಮೂರೂ ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದ್ದು, ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ.
ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.
ಹಾಸನದ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ಸಂಬಂಧ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ.