back to top
22.3 C
Bengaluru
Thursday, July 31, 2025
HomeMoviesKannadaDarshan ಜಾಮೀನು ಅರ್ಜಿ ಕಾಯ್ದಿರಿಸಿದ High Court

Darshan ಜಾಮೀನು ಅರ್ಜಿ ಕಾಯ್ದಿರಿಸಿದ High Court

- Advertisement -
- Advertisement -

ದರ್ಶನ್ ಜಾಮೀನು ಅರ್ಜಿಯ (Acror Darshan’s bail Plea) ವಿಚಾರಣೆ ಹೈಕೋರ್ಟ್​ನಲ್ಲಿ (High Court) ನಡೆದಿದೆ. ದರ್ಶನ್​ರ (Darshan) ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು (bail) ಕೇಳಲಾಗಿದೆ. ದರ್ಶನ್​ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ.

ಆದರೆ SPP ಅವರು ದರ್ಶನ್​ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ.

ನಿನ್ನೆಯ ವಾದ ಮುಂದುವರೆಸಿದ ದರ್ಶನ್ ವಕೀಲ ಸಿವಿ ನಾಗೇಶ್, ‘ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ. ಅದರಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೇ ಮುಂದುವರಿದರೆ ಇನ್ನಷ್ಟು ಸಮಸ್ಯೆ ಆಗಬಹುದು. ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತಪರಿಚಲನೆ ಆಗುತ್ತಿಲ್ಲ

ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗದು, ಅದಕ್ಕೆ ಶಸ್ತ್ರಚಿಕಿತ್ಸೆಯನ್ನೇ ಮಾಡಿಸಬೇಕು. ಈ ಹಿಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾಗ ಆರೋಗ್ಯ ಸಮಸ್ಯೆ ಉಲ್ಲೇಖಿಸಿರಲಿಲ್ಲ. ಆದರೆ ಈಗ ಸಮಸ್ಯೆ ಉಲ್ಬಣ ಆಗಿರುವ ಕಾರಣ ಕೇಳುತ್ತಿದ್ದೇವೆ. ದರ್ಶನ್​ಗೆ ಮಧ್ಯಂತರ ಜಾಮೀನು ನೀಡಬೇಕು’ ಎಂದು ವಾದಿಸಿದರು.

ಎಸ್​ಪಿಪಿ ಪ್ರಸನ್ನ ಅವರು, ‘ವೈದ್ಯರ ವರದಿಯಲ್ಲಿ ಯಾವ ರೀತಿಯ ಶಸ್ತ್ರಚಿಕಿತ್ಸೆ ಮಾಡಬೇಕಿದೆ? ಎಷ್ಟು ದಿನದ ಅವಶ್ಯಕತೆ ಇದೆ? ಎಲ್ಲಿ ಆಪರೇಷನ್ ಮಾಡಲಾಗುವುದು ಎಂಬಿತ್ಯಾದಿ ಮಾಹಿತಿ ಇಲ್ಲ’ ಎಂದರು.

ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ಅವರು, ‘ದರ್ಶನ್ ಮೈಸೂರು ನಿವಾಸಿ ಆಗಿದ್ದು, ಈ ಹಿಂದೆ ಒಮ್ಮೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈಗಲೂ ಸಹ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು ಯಾರೂ ಮೈಸೂರಿನಲ್ಲಿ ಇಲ್ಲ’ ಎಂದರು.

ಇಬ್ಬರೂ ವಕೀಲರ ವಾದಗಳನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಅಂದರೆ ನಾಳೆಗೆ ಮುಂದೂಡಿದರು. ನಾಳೆ ದರ್ಶನ್​ಗೆ ಷರತ್ತು ಸಹಿತ ಮಧ್ಯಂತರ ಜಾಮೀನು ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page