Bengaluru: ಆರೋಪಿಗಳು ಚುನಾವಣಾ ಬಾಂಡ್ಗಳ (election bond) ಸೋಗಿನಲ್ಲಿ ಸುಲಿಗೆ ಮಾಡಿದ್ದು, 8,000 ಕೋಟಿ ರೂ. ಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಆರೋಪಿಸಿ ‘ಜನಾಧಿಕಾರ ಸಂಘರ್ಷ ಪರಿಷತ್’ (Janadhikar Sangharsa Parishad’ – JSP) ಸಹ-ಸಂಸ್ಥಾಪಕ ಆದರ್ಶ್ ಆರ್ ಅಯ್ಯರ್ (Adarsh R Iyer) ಅವರು ದೂರು ದಾಖಲಿಸಿದ್ದರು.
ಈಗ ರದ್ದಾಗಿರುವ ಚುನಾವಣಾ ಬಾಂಡ್ಗಳ (election bond) ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Finance Minister Nirmala Sitharaman) ಮತ್ತು ಇತರ ನಾಯಕರ ವಿರುದ್ಧ ತನಿಖೆಗೆ ಹೈಕೋರ್ಟ್ (High Court)ಸೋಮವಾರ ತಡೆ ನೀಡಿದೆ.
FIR ನಲ್ಲಿ ತನ್ನ ಹೆಸರಿರುವುದನ್ನು ಪ್ರಶ್ನಿಸಿ BJP ನಾಯಕ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ (M Nagaprasanna) ಅವರಿದ್ದ ನ್ಯಾಯಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ನಿಗದಿಪಡಿಸಿದೆ.
ಆರೋಪಿಗಳು ಚುನಾವಣಾ ಬಾಂಡ್ಗಳ ಸೋಗಿನಲ್ಲಿ ಸುಲಿಗೆ ಮಾಡಿದ್ದು, 8,000 ಕೋಟಿ ರೂ. ಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಆರೋಪಿಸಿ ‘ಜನಾಧಿಕಾರ ಸಂಘರ್ಷ ಪರಿಷತ್’ (ಜೆಎಸ್ಪಿ) ಸಹ-ಸಂಸ್ಥಾಪಕ ಆದರ್ಶ್ ಆರ್ ಅಯ್ಯರ್ ಅವರು ದೂರು ದಾಖಲಿಸಿದ್ದರು.
ED ಅಧಿಕಾರಿಗಳ ನೆರವು ಮತ್ತು ಬೆಂಬಲದ ಮೂಲಕ ಸೀತಾರಾಮನ್, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿನ ಇತರ ಪದಾಧಿಕಾರಿಗಳ ಅನುಕೂಲಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಸುಲಿಗೆಗೆ ಅನುಕೂಲ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಈ ಯೋಜನೆಯನ್ನು ರದ್ದುಗೊಳಿಸಿತ್ತು. ಇದು ಸಂವಿಧಾನದ ಅಡಿಯ ಮಾಹಿತಿ ಮತ್ತು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ (violates freedom of information and freedom of speech and expression) ಎಂದು ಹೇಳಿತ್ತು.