Home Health ಭಾರತದಲ್ಲಿ HMPV: ಹೊಸ ವೈರಸ್ ಅಲ್ಲ, ಆತಂಕ ಪಡಬೇಕಿಲ್ಲ

ಭಾರತದಲ್ಲಿ HMPV: ಹೊಸ ವೈರಸ್ ಅಲ್ಲ, ಆತಂಕ ಪಡಬೇಕಿಲ್ಲ

HMPV

Delhi: 2001ರಲ್ಲಿ ಮೊದಲಬಾರಿಗೆ ಪತ್ತೆಯಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಹೊಸದಾಗಿ ಕಂಡುಬಂದ ವೈರಸ್ ಏನಲ್ಲ. ಇದು ಕಳೆದ ಹಲವು ವರ್ಷಗಳಿಂದ ಜಾಗತಿಕವಾಗಿ ಹರಡುತ್ತಿದೆ. ಹೀಗಾಗಿ, ಈ ವೈರಸ್ ಬಗ್ಗೆ ಹೊಸದಾಗಿ ಭಯ ಪಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸ್ಪಷ್ಟಪಡಿಸಿದ್ದಾರೆ.

ಚೀನಾದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಮತ್ತು ಭಾರತದಲ್ಲಿ 6 ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ.

“HMPV ಹೊಸ ವೈರಸ್ ಅಲ್ಲ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಈ ವೈರಸ್ ಗಾಳಿಯ ಮೂಲಕ ಅಥವಾ ಉಸಿರಾಟದ ಹನಿಗಳ ಮೂಲಕ ಹರಡುತ್ತದೆ. ಇದು ಚಳಿಗಾಲ ಮತ್ತು ವಸಂತಕಾಲದ ಆರಂಭದಲ್ಲಿ ಹೆಚ್ಚು ಸಕ್ರಿಯವಾಗಿರುತ್ತದೆ,” ಎಂದು ಜೆ.ಪಿ. ನಡ್ಡಾ ತಿಳಿಸಿದ್ದಾರೆ.

HMPV ಸಾಮಾನ್ಯವಾಗಿ ಶೀತದ ಸಮಯದಲ್ಲಿ ಹೆಚ್ಚು ಸಕ್ರಿಯವಾಗಿರುತ್ತದೆ. ತೀವ್ರ ರೋಗಲಕ್ಷಣಗಳು ಕಾಣಿಸಿಕೊಂಡರೆ ಆರೋಗ್ಯ ತಜ್ಞರನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ. ದೇಶದಲ್ಲಿ ಪತ್ತೆಯಾದ 6 ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ 2, ಕೋಲ್ಕತ್ತಾ, ಅಹಮದಾಬಾದ್ ಮತ್ತು ಚೆನ್ನೈಗಳಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

ಆರೋಗ್ಯ ಸಚಿವಾಲಯ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ಚೀನಾ ಮತ್ತು ನೆರೆಯ ದೇಶಗಳಲ್ಲಿ ಪರಿಸ್ಥಿತಿಯನ್ನು ನಿಗಾ ಇಡುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ (WHO) ಈ ವೈರಸ್ ಬಗ್ಗೆ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version