Hoskote : ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಕೈಗಾರಿಕೋದ್ಯಮಿಗಳು ಸಹಕಾರ ನೀಡಬೇಕೆಂದು ಹೊಸಕೋಟೆ ತಾಲ್ಲೂಕು ಶಾಸಕ ಶರತ್ ಬಚ್ಚೇಗೌಡ (Sharath Kumar Bache Gowda) ಕರೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಆಯೋಜಿಸಲಾಗಿದ್ದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಕೈಗಾರಿಕೆಗಳು ಈಗಾಗಲೇ ಹಲವು ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ಅದನ್ನು hospitais ಮತ್ತು ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಮುಂದುವರಿಸಬೇಕೆಂದು ಕೋರಿದರು.
ಸಭೆಯಲ್ಲಿ, ಕಂಪನಿಗಳು ತಮ್ಮ ಸಿಎಸ್ಆರ್ ಅನುದಾನದ ಮೂಲಕ ಈಗಾಗಲೇ ಕೈಗೊಂಡಿರುವ ಕಾರ್ಯಗಳು, ಪ್ರಗತಿ, ಮತ್ತು ಮುಂದಿನ ವರ್ಷದ ಯೋಜನೆಗಳ ಕುರಿತು ಚರ್ಚೆ ಮಾಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿ ನರೇಂದ್ರ ಬಾಬು, ತಾ.ಪಂ ಇಒ ಸಿ.ಎನ್. ನಾರಾಯಣಸ್ವಾಮಿ, ದಂಡಾಧಿಕಾರಿ ಸೋಮಶೇಖರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್ ಉಪಸ್ಥಿತರಿದ್ದರು.