Hassan: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ (Hasanamba) ಸಾರ್ವಜನಿಕ ದರ್ಶನೋತ್ಸವದ ಮೊದಲ ದಿನವೇ ಶಕ್ತಿದೇವತೆಯನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಹರಿದು ಬಂದಿದೆ.
ಹಾಸನಾಂಬ ದೇವಿ ದರ್ಶನಕ್ಕೆ ಎರಡನೇ ದಿನವೂ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದಾರೆ. ದೇವಿ ದರ್ಶನಕ್ಕೆ ಭಕ್ತರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಿದ್ದಾರೆ.
ಮೊದಲ ದಿನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಹಾಸನಾಂಬ ದೇವಿ ದರ್ಶನ ಪಡೆದರು.
ಒಟ್ಟಿನಲ್ಲಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ಕಣ್ತುಂಬಿಕೊಳ್ಳಲು ಎಲ್ಲೆಡೆಗಳಿಂದ ಭಕ್ತರು ಆಗಮಿಸುವ ಜೊತೆಗೆ ಗಣ್ಯರು, ಸಿನಿಮಾ ನಟರು ಕೂಡ ದೇವಿಯ ಆಶೀರ್ವಾದ ಪಡೆಯಲು ಹಾಸನದತ್ತ ಬರುತ್ತಿದ್ದಾರೆ. ಒಟ್ಟು 9 ದಿನಗಳು ಭಕ್ತರಿಗೆ ದರ್ಶನಕ್ಕೆ ಅವಕಾಶ ಇದ್ದು ಲಕ್ಷ ಲಕ್ಷ ಭಕ್ತರು ಹಾಸನದತ್ತ ಆಗಮಿಸುತ್ತಿದ್ದಾರೆ.