Doddaballapura, Bengaluru Rural : ರಥಸಪ್ತಮಿ (Ratha Saptami) ಅಂಗವಾಗಿ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ಮಹಾರಥೋತ್ಸವ (Hulukadi Betta Veerabhadra Swamy and Bhadrakalamma Maha Rathotsava) ವಿಜೃಂಭಣೆಯಿಂದ ನಡೆಯಿತು. ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಜನ ಭಕ್ತಾಧಿಗಳು ರಥೋತ್ಸವದಲ್ಲಿ ಭಾಗವಹಿಸಿ ರಥಕ್ಕೆ ಹಣ್ಣು ದವನ ಅರ್ಪಿಸಿ ಭಕ್ತಿ ಸಮರ್ಪಿಸಿದರು.
ಭಕ್ತಾದಿಗಳು ಹುಲುಕಡಿ ಬೆಟ್ಟದ ಮೇಲಿನ ವೀರಭದ್ರಸ್ವಾಮಿ ದೇಗುಲಕ್ಕೂ ಭೇಟಿ ನೀಡಿ ದರ್ಶನ ಪಡೆದರು. ದೇವಾಲಯದಲ್ಲಿ ಹೋಮ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಥೋತ್ಸವದಲ್ಲಿ ಭಾಗವಹಿಸಿದ್ದ ವೀರಗಾಸೆ ಕುಣಿತ, ನಂದಿ ಧ್ವಜ ಹಾಗೂ ಡೊಳ್ಳು ಕುಣಿತಗಳು ದೀಪಾರಾಧನೆ ಪ್ರಮುಖ ಆಕರ್ಷಣೆಯಾಗಿತ್ತು.
ಪುರಾಣ ಪ್ರಸಿದ್ಧ ಹುಲುಕುಡಿ ಕ್ಷೇತ್ರ ತನ್ನದೇ ಆದ ವಿಶಿಷ್ಟವಾದ ಇತಿಹಾಸ ಹೊಂದಿದ್ದು ಭಕ್ತಾದಿಗಳು ಕ್ಷೇತ್ರದಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸುವ ಮೂಲಕ ಕ್ಷೇತ್ರದ ಪ್ರಗತಿಗೆ ಸಹಕರಿಸಬೇಕು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.