Home Karnataka Mysuru ಹುಣಸೂರು ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ

ಹುಣಸೂರು ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ

449
Hunasuru Town Municipal Council

Hunasuru, Mysuru : ಹುಣಸೂರು ನಗರಸಭೆ (Town Municipal Council) ಅಧ್ಯಕ್ಷರಾಗಿದ್ದ ಸೌರಭ ಸಿದ್ದರಾಜು ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಂಬತ್ತನೇ ವಾರ್ಡ್‌ನ ಕಾಂಗ್ರೆಸ್‌ ಸದಸ್ಯೆ ಸಮೀನಾ ಪರ್ವಿನ್ ಗುರುವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜೆಡಿಎಸ್‌, ಬಿಜೆಪಿ ಅಧ್ಯಕ್ಷರ ಚುನಾವಣೆಯಲ್ಲಿ ಭಾಗಿಯಾಗದಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ಕರ್ತವ್ಯ ನಿರ್ವಹಿಸಿದರು.

ನೂತನ ಅಧ್ಯಕ್ಷೆ ಸಮೀನಾ ಪರ್ವಿನ್ ಮಾತನಾಡಿ ‘ನಗರದಲ್ಲಿ ಕುಡಿಯುವ ನೀರು, ಶುಚಿತ್ವ ಹಾಗೂ ನಗರದ ಸೌಂದರ್ಯ ಕಾಪಾಡಲು ಮೊದಲ ಆದ್ಯತೆ ನೀಡುವೆ’ ಎಂದು ತಿಳಿಸಿದರು.

ನೂತನ ಅಧ್ಯಕ್ಷರಿಗೆ ಶಾಸಕ ಮಂಜುನಾಥ್ ಶುಭಕೋರಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page