back to top
26.4 C
Bengaluru
Friday, August 1, 2025
HomeKarnatakaMysuruಮತಾಂತರ ನಿಷೇಧ ಮಸೂದೆ ಹಿಂಪಡೆಯಲು ಕೋರಿ ಪ್ರತಿಭಟನೆ

ಮತಾಂತರ ನಿಷೇಧ ಮಸೂದೆ ಹಿಂಪಡೆಯಲು ಕೋರಿ ಪ್ರತಿಭಟನೆ

- Advertisement -
- Advertisement -

Hunsuru, Mysuru District : ಹುಣಸೂರು ನಗರದ ಸಂವಿಧಾನ ವೃತ್ತದಲ್ಲಿ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳು ಮತಾಂತರ ನಿಷೇಧ ಮಸೂದೆ (Anti conversion bill) ಹಿಂಪಡೆಯುವಂತೆ ಒತ್ತಾಯಿಸಿ ಸರ್ಕಾರ ವಿರುದ್ಧ ಪ್ರತಿಭಟನೆ (Protest) ನಡೆಸಿದರು.

ದಲಿತ ಸಂಘರ್ಷ ಸಮಿತಿ (DSS) ಮುಖಂಡ ರತ್ನಾಪುರಿ ಪುಟ್ಟಸ್ವಾಮಿ ಮಾತನಾಡಿ “ರಾಜ್ಯ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಯೋಜನೆಗಳು ಮತ್ತು ಅಭಿವೃದ್ಧಿಗೆ ಪೂರಕವಾದ ಚರ್ಚೆ ಮಾಡದೆ ಮತಾಂತರ ನಿಷೇಧ ಮಸೂದೆಗೆ ಒತ್ತು ನೀಡಿ ಜನರ ಸಂವಿಧಾನಾತ್ಮಕ ಹಕ್ಕು ಕಸಿದುಕೊಳ್ಳುವ ಪ್ರಯತ್ನ ಮಾಡಿದೆ” ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ದಸಂಸ, ಹುಣಸೂರು ಪಬ್ಲಿಕ್ ಪೀಸ್ ಸಮಿತಿ (Public Peace Committee) ಸದಸ್ಯರು, ಬಿಎಸ್‌ಪಿ (BSP), ಎಸ್.ಎಫ್.ಐ. ಸಿಪಿಐ(ಎಂ) CPI(M) ಸಂಘಟನೆ ಕಾರ್ಯಕರ್ತರು, ಮುಖಂಡರಾದ ನಿಂಗರಾಜ್ ಮಲ್ಲಾಡಿ, ಬಸವರಾಜ್ ಕಲ್ಕುಣಿಕೆ, ಡೇವಿಡ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page