ಇಬ್ಲೂರು ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ಜಿಗೆ ಪತ್ರ ಬರೆದು, ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಒಆರ್ಆರ್ ರಸ್ತೆಯ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ವಿಪ್ರೋ ಕ್ಯಾಂಪಸ್ ಮೂಲಕ ಸಂಚಾರಕ್ಕೆ ಅವಕಾಶ ನೀಡಿದರೆ, ಪೀಕ್ ಅವರ್ ಸಮಯದಲ್ಲಿ ಶೇಕಡಾ 30ರಷ್ಟು ಟ್ರಾಫಿಕ್ ಕಡಿಮೆಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹೊರವಲಯದ ರಸ್ತೆಗಳು ಗುಂಡಿಗಳಿಂದ ತುಂಬಿದ್ದು, ಸರ್ಕಾರ ಅವುಗಳನ್ನು ಸರಿಪಡಿಸಲು ಮುಂದಾಗಿದೆ.
ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಮುಂದಾಗಿ ಪತ್ರ ಬರೆದಿರುವುದು ವಿಶೇಷವೆಂದು ಹೇಳಲಾಗಿದೆ.