Bengaluru: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶ ಪ್ರಜೆ (Bangladeshi national) ಮೊಹಮ್ಮದ್ ಸಿದ್ಧಿಕ್ (55) ಅವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಸಿದ್ಧಿಕ್ 2006ರಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದನು. ಪಶ್ಚಿಮ ಬಂಗಾಳದ ಮೆಲ್ಪಾ ಜಿಲ್ಲೆಯ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪ್ರಮಾಣ ಪತ್ರ ಪಡೆದುಕೊಂಡಿದ್ದನು.
ಅನಂತರ, ಕಾಡುಗೋಡಿಯ ದೊಡ್ಡಬನಹಳ್ಳಿಯಲ್ಲಿ ವಾಸವಿದ್ದ ಮೊಹಮ್ಮದ್ ಸಿದ್ಧಿಕ್, ನಕಲಿ ವರ್ಗಾವಣೆ ಪತ್ರದ ಸಹಾಯದಿಂದ ಪಾಸ್ಪೋರ್ಟ್, ವೋಟರ್ ಐಡಿ, ಪಾನ್ ಕಾರ್ಡ್ ಪಡೆದುಕೊಂಡಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ಮೊಹಮ್ಮದ್ ಸಿದ್ಧಿಕ್ ವಿರುದ್ಧ ಫಾರಿನರ್ಸ್ ಆಕ್ಟ್, BNS 336(3), 340(2), 339 ಸೆಕ್ಷನ್‌ಗಳಡಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈತನೊಂದಿಗೆ ಇನ್ನೂ 15-20 ಬಾಂಗ್ಲಾ ವಲಸಿಗರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಮಾಹಿತಿ FIRನಲ್ಲಿ ದಾಖಲಾಗಿದೆ. Bengaluru ಥಣಿಸಂದ್ರದ ವ್ಯಕ್ತಿಯೊಬ್ಬರು ಪ್ಯಾನ್ ಕಾರ್ಡ್, ವೋಟರ್ ಐಡಿ, ಇತ್ಯಾದಿ ದಾಖಲೆಗಳನ್ನು ಮಾಡಿಸಿಕೊಟ್ಟಿದ್ದಾರೆ ಎಂಬ ಮಾಹಿತಿ ಸಹ ಬೆಳಕಿಗೆ ಬಂದಿದೆ.