Home India AICC Meeting: Ahmedabad ನಲ್ಲಿ ಕಾಂಗ್ರೆಸ್ ನಾಯಕರ ಸಭೆ

AICC Meeting: Ahmedabad ನಲ್ಲಿ ಕಾಂಗ್ರೆಸ್ ನಾಯಕರ ಸಭೆ

AICC meeting

ಗುಜರಾತ್‌ನ ಅಹಮದಾಬಾದ್‌ನಲ್ಲಿ (Ahmedabad) AICC (All India Congress Committee)ಯ ಮಹತ್ವದ ಸಭೆ ಏಪ್ರಿಲ್ 8ರಿಂದ ಎರಡು ದಿನಗಳ ಕಾಲ ನಡೆಯುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ 169 ಮಂದಿ ಹಿರಿಯ ಕಾಂಗ್ರೆಸ್ ನಾಯಕರು ಈ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಸಭೆಯ ಮುಖ್ಯ ಉದ್ದೇಶಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆ, ಜಿಲ್ಲಾಧ್ಯಕ್ಷರಿಗೆ ಹೆಚ್ಚು ಅಧಿಕಾರ ನೀಡುವ, ಮತ್ತು ಚುನಾವಣಾ ಟಿಕೆಟ್ ಹಂಚಿಕೆಯಲ್ಲಿ ಅವರ ಪಾತ್ರ ನಿರ್ಧರಿಸುವ ಕುರಿತು ಚರ್ಚೆಗಳು ನಡೆಯುತ್ತವೆ. ಜೊತೆಗೆ ಗುಜರಾತ್‌ನಲ್ಲಿ ಪಕ್ಷವನ್ನು ಬಲಪಡಿಸುವ ಹಾಗೂ ಅಧಿಕಾರಕ್ಕೆ ತರುವ ಬಗ್ಗೆ ಯೋಜನೆ ರೂಪಿಸಲಾಗುತ್ತದೆ.

ಸಭೆಯ ನಂತರ ಎಲ್ಲಾ ನಾಯಕರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 9ರಂದು ಸಬರಮತಿ ನದಿಯ ದಡದಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಲಿದ್ದು, 2,500ಕ್ಕೂ ಹೆಚ್ಚು ನಾಯಕರು ಹಾಗೂ ಎಐಸಿಸಿ ಸದಸ್ಯರು ಭಾಗವಹಿಸಲಿದ್ದಾರೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ.

ಪಕ್ಷದ ಉನ್ನತ ನಾಯಕರು ಪ್ರಿಯಾಂಕಾ ಗಾಂಧಿಗೆ ಪ್ರಮುಖ ರಾಜ್ಯದ ಉಸ್ತುವಾರಿ ಅಥವಾ ಚುನಾವಣಾ ಜವಾಬ್ದಾರಿ ನೀಡುವ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಸ್ತುತ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರೂ, ಯಾವುದೇ ನಿರ್ದಿಷ್ಟ ಜವಾಬ್ದಾರಿಯಿಲ್ಲ. ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಸಭೆಯಲ್ಲಿ ಚರ್ಚೆಯಾಗಬಹುದಾದ ಇನ್ನಿತರೆ ವಿಷಯಗಳು

  • ಜಾತಿ ಜನಗಣತಿ ಕುರಿತ ರಾಹುಲ್ ಗಾಂಧಿಯ ಅಭಿಪ್ರಾಯ
  • ವಕ್ಫ್ ಕಾಯ್ದೆಗೆ ವಿರೋಧ
  • ಇಂಡಿ ಮೈತ್ರಿ ತಂತ್ರ
  • ದೇಶದ ಆರ್ಥಿಕ ಸ್ಥಿತಿ ಮತ್ತು ಸಂವಿಧಾನ ಕುರಿತಾಗಿ ಬಿಜೆಪಿಯ ವಿರುದ್ಧದ ಆರೋಪ
  • ಮತದಾರರ ಪಟ್ಟಿಯಲ್ಲಿ ಅಕ್ರಮಗಳ ಕುರಿತು ಚರ್ಚೆ

ಅಮೆರಿಕದ ಸುಂಕ ನೀತಿಯ ಪರಿಣಾಮವಾಗಿ ಭಾರತೀಯ ಷೇರು ಮಾರುಕಟ್ಟೆಗೆ ನಷ್ಟವಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮುಂದಿಟ್ಟಿದೆ. ಸುಮಾರು ₹19 ಲಕ್ಷ ಕೋಟಿ ನಷ್ಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಳವು ಸಾಮಾನ್ಯ ಜನರ ಮೇಲೆ ಹೊರೆ ತಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ಸುಂಕ ಕುರಿತಂತೆ ಸ್ಪಷ್ಟ ಉತ್ತರ ನೀಡದೆ ಬದಲಾಗಿ ಜನರ ಮೇಲೇ ಹೆಚ್ಚಿನ ತೆರಿಗೆ ಹೊರೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version