ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Former Pakistani Prime Minister Imran Khan)ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯದಿಂದ ದೋಷಿಯಾಗಿದ್ದಾರೆ. ಈ ಪ್ರಕರಣದಲ್ಲಿ, ಇಮ್ರಾನ್ ಖಾನ್ ಅವರಿಗೆ 14 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ, ಬುಶ್ರಾ ಬೀಬಿಗೆ 7 ಲಕ್ಷ ದಂಡ ವಿಧಿಸಲಾಗಿದೆ.
ಇವರೆಡರಿಗೂ ದಂಡ ಪಾವತಿಸಲು ಸಾಧ್ಯವಾಗದಿದ್ದರೆ, ಇಮ್ರಾನ್ ಖಾನ್ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಬುಶ್ರಾ ಬೀಬಿ 3 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಗೆ ಒಳಪಡಲಿದ್ದಾರೆ.
ಈ ಶಿಕ್ಷೆ, ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದೆ. ಇಮ್ರಾನ್ ಮತ್ತು ಅವರ ಪತ್ನಿ ಅಧಿಕಾರ ದುರ್ಬಳಕೆ ಮಾಡಿ, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ.
2023ರ ಮೇ 9ರಂದು ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಬುಶ್ರಾ ಬೀಬಿ ತೀರ್ಪು ಹೊರಬಂದ ತಕ್ಷಣ ಬಂಧಿತರಾಗಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು, ಇತರ ಆಸ್ತಿ ಉದ್ಯಮಿಗಳು, ಪಾಕಿಸ್ತಾನದಿಂದ ಹೊರಗಿದ್ದಾರೆಂದು ತಿಳಿದುಬಂದಿದೆ.
ಇಮ್ರಾನ್ ಪತ್ನಿ ಬುಶ್ರಾ ಬೀಬಿ ಐದು ಕ್ಯಾರೆಟ್ ವಜ್ರದ ಉಂಗುರ ಬೇಡಿಕೆ ಇಟ್ಟಿರುವ ಆಡಿಯೋ ಸೋರಿಕೆಯಾಗಿದೆ. ಈ ಸಂಭಾಷಣೆ ಅಲ್ಪಸಮಯದಲ್ಲೇ ಹೆಚ್ಚುವರಿ ತನಿಖೆಗೆ ಕಾರಣವಾಗಿದೆ.