ಆಸ್ಟ್ರೇಲಿಯಾ (Australia) ವಿರುದ್ಧದ 4ನೇ ಟೆಸ್ಟ್: ಮೆಲ್ಬೋರ್ನ್‌ನ MCG ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ (India and Australia) ನಡುವಿನ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ಸ್ಯಾಮ್ ಕೊನ್ಸ್ಟಾಸ್ ನಡುವಿನ ಮಾತಿನ ಚಕಮಕಿ ಗಮನ ಸೆಳೆದಿತ್ತು. ಈ ಸಂದರ್ಭದಲ್ಲಿ ಕೊಹ್ಲಿ ಸ್ಯಾಮ್ ಕೊನ್ಸ್ಟಾಸ್ ಅವರನ್ನು ಭುಜದಿಂದ ಗುದ್ದಿ ಕೆಣಕಿದರು.
ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿ, ವಿರಾಟ್ ಕೊಹ್ಲಿಗೆ ದಂಡ ವಿಧಿಸಿದೆ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ.
ಕೊಹ್ಲಿಯ ವಿರುದ್ಧದ ಆರೋಪವನ್ನು ಅವರು ಒಪ್ಪಿಕೊಂಡಿದ್ದು, ಈ ಕಾರಣದಿಂದಲೇ ಡಿಮೆರಿಟ್ ಪಾಯಿಂಟ್ ಮತ್ತು 20% ದಂಡ ವಿಧಿಸಲಾಗಿದೆ. ICC ನಿಯಮಗಳು ಪ್ರಕಾರ, 24 ತಿಂಗಳ ಅವಧಿಯಲ್ಲಿ 4 ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದರೆ, ಆಟಗಾರನನ್ನು ದಂಡ ಅಥವಾ ನಿಷೇಧಿಸಲಾಗಬಹುದು.
ಹೀಗಾಗಿ, ಕೊಹ್ಲಿ ಮುಂದಿನ ಪಂದ್ಯಗಳಲ್ಲಿ ಶಿಸ್ತಿನಿಂದ ಆಡಬೇಕಾಗುತ್ತದೆ. ಮೊಹಮ್ಮದ್ ಸಿರಾಜ್ ಕೂಡ ಮೊದಲು ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದಿದ್ದರು.