ICC 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy 2025) ಫೆಬ್ರವರಿ 20ರಂದು ಬಾಂಗ್ಲಾದೇಶ (Bangladesh) ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಆದರೆ, ಟೀಮ್ ಇಂಡಿಯಾದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರಿಂದಾಗಿ ನಾಯಕ ರೋಹಿತ್ ಶರ್ಮಾ ತಂಡದ ಆಯ್ಕೆ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ (Ricky Ponting) ಅವರು ರೋಹಿತ್ ಶರ್ಮಾಗೆ ಸಲಹೆ ನೀಡಿದ್ದಾರೆ. ಬುಮ್ರಾ ಬದಲಿಗೆ ವಿಶ್ವ ಚಾಂಪಿಯನ್ ಬೌಲರ್ ಆಯ್ಕೆ ಮಾಡುವಂತೆ ಅವರು ಸೂಚಿಸಿದ್ದಾರೆ.
ಪಾಂಟಿಂಗ್ ಅವರ ಸಲಹೆಯಂತೆ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಬದಲಿಗೆ ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡುವುದು ಸೂಕ್ತ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ರಾಣಾ ಉತ್ತಮ ಪ್ರದರ್ಶನ ನೀಡಿದರೂ, ದೊಡ್ಡ ಟೂರ್ನಿಗಳಲ್ಲಿ ಅರ್ಷದೀಪ್ ಹೆಚ್ಚು ಪ್ರಭಾವ ಬೀರುತ್ತಾರೆ ಎಂದು ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.