ಬೆಂಗಳೂರು ಟೆಸ್ಟ್ (IND vs NZ) ಪಂದ್ಯದಲ್ಲಿ ಕಿವೀಸ್ (Kiwis) ವೇಗಿಗಳ ಮುಂದೆ ಮಂಡಿಯೂರಿದ್ದ ಟೀಂ ಇಂಡಿಯಾ (Team India) ಇದೀಗ ಪುಣೆ ಟೆಸ್ಟ್ (Pune Test) ಪಂದ್ಯದಲ್ಲಿ ಕಿವೀಸ್ ಸ್ಪಿನ್ನರ್ಗಳ ದಾಳಿಗೆ ನಲುಗಿ ಹೋಗಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಕಿವೀಸ್ ತಂಡವನ್ನು 259 ರನ್ಗಳಿಗೆ ಆಲೌಟ್ ಮಾಡಿ, ಬ್ಯಾಟಿಂಗ್ ಆರಂಭಿಸಿದ್ದ ರೋಹಿತ್ ಪಡೆ ಇದೀಗ ಎರಡನೇ ದಿನದಾಟದ ಎರಡನೇ ಸೆಷನ್ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 156 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.
ಈ ಮೂಲಕ 103 ರನ್ಗಳ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ಕಿವೀಸ್ ಪರ ಸ್ಪಿನ್ ಜಾದೂ ತೊರಿದ ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ 7 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಅಲ್ಪ ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಮೊದಲ ದಿನವೇ ನಾಯಕ ರೋಹಿತ್ ಶರ್ಮಾ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು.
ಇನ್ನು ಎರಡನೇ ದಿನದಾಟವನ್ನು ಮುಂದುವರೆಸಿದ ಗಿಲ್ ಹಾಗೂ ಜೈಸ್ವಾಲ್ ಕೆಲ ಹೊತ್ತು ಉತ್ತಮ ಜೊತೆಯಾಟ ನಿರ್ಮಿಸಿದರು.
ಉಳಿದಂತೆ ರಿಷಬ್ ಪಂತ್ 18 ರನ್, ಸರ್ಫರಾಜ್ ಖಾನ್ 11 ರನ್, ಆರ್ ಅಶ್ವಿನ್ 4 ರನ್, ಆಕಾಶ್ ದೀಪ್ 6 ರನ್ ಕಲೆಹಾಕಿದರೆ, ಬುಮ್ರಾ ಖಾತೆ ತೆರೆಯದೆ ಔಟಾದರು.
ತಂಡದ ಪರ ರವೀಂದ್ರ ಜಡೇಜಾ ಗರಿಷ್ಠ 38 ರನ್ ಬಾರಿಸಿದರೆ, ವಾಷಿಂಗ್ಟನ್ ಸುಂದರ್ 18 ರನ್ ಗಳಿಸಿ ಅಜೇಯರಾಗಿ ಉಳಿದರು.
ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ 7 ವಿಕೆಟ್ ಕಬಳಿಸಿದ ಮಿಚೆಲ್ ಸ್ಯಾಂಟ್ನರ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ 5 ವಿಕೆಟ್ ಕಬಳಿಸಿದ ಸಾಧನೆ ಮಾಡಿದರು.
ಭಾರತದಲ್ಲಿ ನ್ಯೂಜಿಲೆಂಡ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು 2021ರಲ್ಲಿ ಅಜಾಜ್ ಪಟೇಲ್ 119 ರನ್ ನೀಡಿ 10 ವಿಕೆಟ್ ಪಡೆದಿದ್ದರು.
1976ರಲ್ಲಿ ರಿಚರ್ಡ್ ಹ್ಯಾಡ್ಲಿ 23 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ ಸ್ಯಾಂಟ್ನರ್ 53 ರನ್ ನೀಡಿ 7 ವಿಕೆಟ್ ಪಡೆದಿದ್ದಾರೆ.