New Delhi : ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ (India Gate) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhas Chandra Bose) ಅವರ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಶುಕ್ರವಾರ ಘೋಷಿಸಿದರು.
Granite ನಿಂದ ನಿರ್ಮಿಸಲಾಗುತ್ತಿರುವ ಪ್ರತಿಮೆಯು ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆಯನ್ನು (Hologram Statue) ಅದೇ ಸ್ಥಳದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಅವರು ಹೇಳಿದರು.
ಜನವರಿ 23 ರಂದು ಆಜಾದ್ ಹಿಂದ್ ಫೌಜ್ (Azad Hind Fauj – Indian National Army) ಸಂಸ್ಥಾಪಕ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸುವುದಾಗಿ ಅವರು ತಿಳಿಸಿದರು.
“ಇಡೀ ರಾಷ್ಟ್ರವೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಲು ನನಗೆ ಸಂತೋಷವಾಗಿದೆ” ಎಂದು ಪ್ರಧಾನಿ Tweet ಮಾಡಿದ್ದಾರೆ.