ಭಾರತ ಮತ್ತು ನ್ಯೂಝಿಲೆಂಡ್ ಮಹಿಳಾ ತಂಡಗಳ (India vs New Zealand Women Team) ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium in Ahmedabad) ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ.
ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 59 ರನ್ಗಳ ಭರ್ಜರಿ ಜಯ ಸಾಧಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ 76 ರನ್ಗಳ ಗೆಲುವು ದಾಖಲಿಸಿತ್ತು. ಇದೀಗ ಅಂತಿಮ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ.
ಹೀಗಾಗಿ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 56 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 21 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 34 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ.
ಇನ್ನು ಭಾರತದಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಉಭಯ ತಂಡಗಳು 20 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ 11 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 9 ಪಂದ್ಯಗಳನ್ನು ಗೆದ್ದುಕೊಂಡಿದೆ.