Home Sports Cricket India ಮತ್ತು New Zealand ಮಹಿಳಾ ತಂಡ ಏಕದಿನ ಪಂದ್ಯ

India ಮತ್ತು New Zealand ಮಹಿಳಾ ತಂಡ ಏಕದಿನ ಪಂದ್ಯ

India vs New Zealand Women Cricket

ಭಾರತ ಮತ್ತು ನ್ಯೂಝಿಲೆಂಡ್ ಮಹಿಳಾ ತಂಡಗಳ (India vs New Zealand Women Team) ನಡುವಣ ಮೂರನೇ ಏಕದಿನ ಪಂದ್ಯ ಶುರುವಾಗಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium in Ahmedabad) ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ.

ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 59 ರನ್​ಗಳ ಭರ್ಜರಿ ಜಯ ಸಾಧಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ 76 ರನ್​ಗಳ ಗೆಲುವು ದಾಖಲಿಸಿತ್ತು. ಇದೀಗ ಅಂತಿಮ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ.

ಹೀಗಾಗಿ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 56 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 21 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 34 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ.

ಇನ್ನು ಭಾರತದಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಉಭಯ ತಂಡಗಳು 20 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ 11 ಬಾರಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 9 ಪಂದ್ಯಗಳನ್ನು ಗೆದ್ದುಕೊಂಡಿದೆ.

For Daily Updates WhatsApp ‘HI’ to 7406303366


NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version