
ಇಂದು ಏಷ್ಯಾಕಪ್ (Asia Cup) ಅಂತಿಮ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿದ್ದಾರೆ. ಭಾರತ ಫೈನಲ್‌ಗೆ ಈಗಾಗಲೇ ಪ್ರವೇಶ ಪಡೆದಿದ್ದು, ಈ ಪಂದ್ಯವು ಅವರಿಗಾಗಿ ಔಪಚಾರಿಕವಾಗುತ್ತದೆ. ಶ್ರೀಲಂಕಾ ತಂಡ ಈಗಾಗಲೇ ಟೂರ್ನಿ ಯಿಂದ ಹೊರಬಿದ್ದಿದ್ದು, ಕೊನೆಯ ಪಂದ್ಯ ಆಡಿದ ಮೇಲೆ ಅವರ ಅಭಿಯಾನ ಮುಗಿಯಲಿದೆ. ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾತ್ರಿ 8 ಗಂಟೆಗೆ ನಡೆಯಲಿದೆ.
ಇವರೆಡೂ ತಂಡಗಳು ಇದುವರೆಗೂ 31 ಟಿ20 ಪಂದ್ಯಗಳನ್ನು ಆಡಿದ್ದು, ಭಾರತ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಶ್ರೀಲಂಕಾ 9 ಪಂದ್ಯಗಳಲ್ಲಿ ಮಾತ್ರ ಜಯ ಪಡೆದಿದೆ. ಅಂಕಿಅಂಶಗಳ ಪ್ರಕಾರ ಭಾರತ ತಂಡ ಹೆಚ್ಚು ಬಲಿಷ್ಠವಾಗಿದ್ದು, ಗೆಲುವಿನ ಫೆವರಿಟ್ ತಂಡವಾಗಿದೆ.
ದುಬೈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿದೆ. ಆರಂಭದಲ್ಲಿ ಬ್ಯಾಟರ್ಗಳು ರನ್ ಗಳಿಸಲು ಸಮಯ ತೆಗೆದುಕೊಳ್ಳುತ್ತಾರೆ, ನಂತರ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯ. ಮೊದಲ ಬ್ಯಾಟಿಂಗ್ ಮಾಡಿದ ತಂಡಗಳು 54 ಬಾರಿ ಗೆದ್ದರೆ, ಚೇಸಿಂಗ್ ತಂಡಗಳು 63 ಪಂದ್ಯಗಳನ್ನು ಗೆದ್ದಿವೆ. ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 140, ಎರಡನೇ ಇನ್ನಿಂಗ್ಸ್ ಸರಾಸರಿ 123. ಟಾಸ್ ಗೆದ್ದ ತಂಡ ಮೊದಲ ಬೌಲಿಂಗ್ ಆಯ್ಕೆ ಮಾಡಬಹುದಾದ ಸಾಧ್ಯತೆ ಹೆಚ್ಚು.
ಭಾರತದ ಪ್ರಮುಖ ಆಟಗಾರರು: ಅಭಿಷೇಕ್ ಶರ್ಮಾ ಉತ್ತಮ ಫಾರ್ಮ್ನಲ್ಲಿದ್ದಾರೆ. ಶುಭಮನ್ ಗಿಲ್ ಮತ್ತು ತಿಲಕ್ ವರ್ಮಾ ಸಹ ತಂಡಕ್ಕೆ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ. ಬೌಲಿಂಗ್‌ನಲ್ಲಿ ಕುಲದೀಪ್ ಯಾದವ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಕೂಡ ತಂಡಕ್ಕೆ ಉತ್ತಮ ಬೌಲಿಂಗ್ ನೀಡುತ್ತಿದ್ದಾರೆ.
ಶ್ರೀಲಂಕಾದ ಪ್ರಮುಖ ಆಟಗಾರರು: ಬ್ಯಾಟಿಂಗ್‌ನಲ್ಲಿ ಪಾತುಮ್ ನಿಸ್ಸಂಕ್ ಮತ್ತು ಕುಸಲ್ ಮೆಂಡಿಸ್ ಪ್ರಮುಖ ಆಟಗಾರರು. ಬೌಲಿಂಗ್‌ನಲ್ಲಿ ವನಿಂದು ಹಸರಂಗ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ.
ಇಂದಿನ ಪಂದ್ಯದಲ್ಲಿ ತಂಡದಲ್ಲಿ ಬದಲಾವಣೆ ಸಾಧ್ಯತೆ ಇದೆ. ಒಂದು ವೇಳೆ ಬದಲಾವಣೆ ಮಾಡಿದರೆ, 156 ಸಿಕ್ಸರ್ ಗಳ ಸ್ಪೋಟಕ ಹಿಟ್ಟರ್ ರಿಂಕು ಸಿಂಗ್ ಅವರಿಗೆ ಆಟ ಅವಕಾಶ ಸಿಗಬಹುದು.
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್/ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಕುಲದೀಪ್ ಯಾದವ್ /ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಕಮಿಲ್ ಮಿಶ್ರಾ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ದಸುನ್ ಶನಕ, ಕಮಿಂದು ಮೆಂಡಿಸ್, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ದುಷ್ಮಂತ ಚಮೀರ, ನುವಾನ್ ತುಷಾರ.