ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) ಇಂದು ಮಧ್ಯಾಹ್ನ ಭಯೋತ್ಪಾದಕರ ಗುಂಡಿನ ದಾಳಿ ನಡೆದಿದೆ. ಈ ದುರ್ಘಟನೆಯಲ್ಲಿ 26ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ದಾಳಿಯನ್ನು ಖಂಡಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಭಯೋತ್ಪಾದನೆಯ ವಿರುದ್ಧ ಭಾರತ ಜತೆಗೆ ನಾವು ಬಲವಾಗಿ ನಿಂತಿದ್ದೇವೆ. ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಮತ್ತು ಮೃತರ ಕುಟುಂಬಗಳಿಗೆ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.
ಅದೇ ರೀತಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಕರೆಮಾಡಿ ಸಂತಾಪ ಸೂಚಿಸಿದ್ದಾರೆ. ಅವರು, “ಈ ಕ್ರೂರ ಕೃತ್ಯಕ್ಕೆ ಯಾವುದೇ ನ್ಯಾಯವಿಲ್ಲ. ಅಪರಾಧಿಗಳು ತಪ್ಪದ ಶಿಕ್ಷೆಗೆ ಗುರಿಯಾಗಬೇಕು” ಎಂದು ತಿಳಿಸಿದ್ದಾರೆ.
ಇದರ ಜೊತೆಗೆ, “ಭಾರತದೊಂದಿಗೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನಾವು ಸಹಕಾರವನ್ನು ಹೆಚ್ಚಿಸಿಕೊಳ್ಳಲು ಬದ್ಧರಾಗಿದ್ದೇವೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಪುಟಿನ್ ಹೇಳಿದ್ದಾರೆ.
ಭಾರತದ ಮೇಲೆ ನಡೆದ ಈ ಭಯಾನಕ ದಾಳಿಯ ನಂತರ, ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಬಲವಾದ ಬೆಂಬಲ ವ್ಯಕ್ತವಾಗುತ್ತಿದೆ.