
Chikkaballapur : ಕರ್ನಾಟಕ ವಿಕಲಚೇತನರ ಸಂಸ್ಥೆ ವತಿಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ವಿಶ್ವ ಅಂಗವಿಕಲರ ದಿನಾಚರಣೆ (International Day of Disabled Persons) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಅರುಣಾ ಕುಮಾರಿ ” ಅಂಗವಿಕಲರು ಲೈಂಗಿಕ ಶೋಷಣೆಗೆ ಹೆಚ್ಚು ಒಳಗಾಗುತ್ತಿದ್ದು ಶೋಷಣೆಗೆ ಒಳಗಾದವರು ಕಾನೂನು ಸೇವಾ ಪ್ರಾಧಿಕಾರಕ್ಕೆ ಬಂದರೆ ಎಲ್ಲ ರೀತಿಯ ನೆರವು ನೀಡಲಾಗುವುದು. ಜಿಲ್ಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ಅಂಗವಿಕಲರ ಮೇಲೆ ಹೆಚ್ಚು ದೌರ್ಜನ್ಯಗಳ ಪ್ರಕರಣೆಗಳೇ ಹೆಚ್ಚು. ಅಂಗವಿಕಲರಿಗೆ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆ ಮತ್ತು ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯಲಿದೆ. ಅಂಗವಿಲರಿಗೆ ವಿಶೇಷ ಬುದ್ಧಿಮತ್ತೆ, ವಿಶೇಷ ಸಾಮರ್ಥ್ಯ ಇದೆ. ಭಿಕ್ಷೆ, ಕಳ್ಳತನ ಪ್ರಕರಣದಲ್ಲಿ ಸಿಕ್ಕಿ ಬೀಳುವ ಮಕ್ಕಳಿಗೆ ಪುನವರ್ ವಸತಿ ಕಲ್ಪಿಸಲಾಗುತ್ತದೆ. ಒಂದು ವೇಳೆ ನಿಮಗೆ ಕಾನೂನು ಬದ್ಧವಾಗಿ ದೊರೆಯುವ ಸೌಲಭ್ಯಗಳು ದೊರೆಯದಿದ್ದರೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು. ಪ್ರಾಧಿಕಾರವು ಸಂಬಂಧಿಸಿದ ಇಲಾಖೆಗೆ ಕಳುಹಿಸಿ ಕ್ರಮವಹಿಸುತ್ತದೆ” ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಕಲಚೇತನರ ಸಂಸ್ಥೆ ಅಧ್ಯಕ್ಷ ಕೆ.ಜಿ.ಸುಬ್ರಹ್ಮಣ್ಯಂ, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ, ಮುಖಂಡ ಎಸ್.ಪಿ.ಶ್ರೀನಿವಾಸ್ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವೆಂಕಟೇಗೌಡ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಗಂಗಾಧರ್, ಮಲ್ಲು ಕಂಬಾರ, ಪುಷ್ಪಲತಾ, ಕೃಷ್ಣಪ್ಪ ಹಾಗೂ ಸಂಸ್ಥೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಕಾನೂನು ಬದ್ಧವಾಗಿ ಸರ್ಕಾರಿ ಸೌಲಭ್ಯಗಳು ದೊರೆಯದಿದ್ದರೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ : ನ್ಯಾಯಾಧೀಶರು appeared first on Chikkaballapur.