Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಆಡಳಿತ ವರ್ಗ, ಶಾಲಾ ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕರು 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ (International Day Of Yoga) ಮಾಡಿದರು .
ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ 10ನೇ ಯೋಗ ದಿನದ ಕಾರ್ಯಕ್ರಮದಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದ ಡಾ.ಕೆ.ಸುಧಾಕರ್ ಹಾಗೂ ಅಧಿಕಾರಿಗಳು ಯೋಗಾಸನ ಮಾಡಿದರು.
![International Day Of Yoga Isha Chikkaballapur](https://kannadatopnews.com/wp-content/uploads/2024/06/22JunCBp-1024x683-1.jpg)
ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿಯ ಬಳಿಯ ಈಶ ಯೋಗ ಕೇಂದ್ರದ ಆದಿಯೋಗಿ ಪ್ರತಿಮೆ ಮುಂಭಾಗ ಎನ್‌ಸಿಸಿ ಕೆಡೆಟ್‌ಗಳು, ಬಿಎಸ್‌ಎಫ್ ಯೋಧರು, ಸುತ್ತಲಿನ ಗ್ರಾಮಗಳ ಗ್ರಾಮಸ್ಥರು ಯೋಗಾಭ್ಯಾಸ ಮಾಡಿದರು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕಿನ ಅಲೀಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಶಿಡ್ಲಘಟ್ಟ :
ಶಿಡ್ಲಘಟ್ಟದ ನ್ಯಾಯಾಲಯ ಸಂಕೀರ್ಣದಲ್ಲಿ ಯೋಗದಿನಾಚರಣೆ ಅಂಗವಾಗಿ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಯೋಗಾಭ್ಯಾಸ ನಡೆಸಿದರು.
ಚಿಂತಾಮಣಿ :
ಚಿಂತಾಮಣಿ ನಗರದ ಹೊರವಲಯದ ಕಾವಲಗಾನಹಳ್ಳಿಯಲ್ಲಿರುವ ಜೈನ್ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಬಾಗೇಪಲ್ಲಿ :
ಬಾಗೇಪಲ್ಲಿ ಪಟ್ಟಣದ ಪಿಎಂಶ್ರೀ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಶುಕ್ರವಾರ ಯೋಗ ಪಟುಗಳು, ಪೊಲೀಸರು, ಅಧಿಕಾರಿಗಳು, ಶಿಕ್ಷಕ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಯೋಗ ಪ್ರದರ್ಶನ ಮಾಡಿದರು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.