Bengaluru : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Health & Family Welfare Department) ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ (Anglo Indian Unity Centre) ಸಹಭಾಗಿ ತ್ವದಲ್ಲಿ ಗುರುವಾರ ‘ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ (International Nurses Day) ಮತ್ತು 20ನೇ ಕರ್ನಾಟಕ ರಾಜ್ಯ ಮಟ್ಟದ ಫ್ಲಾರೆನ್ಸ್ ನೈಟಿಂಗೇಲ್ (Florence Nightingale) ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ (Award) – 2020-2021’ರ ಪ್ರದಾನ ಸಮಾರಂಭವನ್ನು ಬೆಂಗಳೂರು ನಗರದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಯುದ್ಧ ಸಂದರ್ಭದಲ್ಲಿ ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ, ವೃತ್ತಿಪರ ಶುಶ್ರೂಷಕರಿಂದ ರೋಗಿಗಳ ಮಾನಸಿಕ ಸ್ಥೈರ್ಯ ಹೆಚ್ಚುತ್ತದೇ. ಉದಾತ್ತವಾದ ವೃತ್ತಿಯಲ್ಲಿರುವ ಶುಶ್ರೂಷಕರ ಮಾನವೀಯ ಸೇವೆಗೆ ಬೆಲೆ ಕಟ್ಟಲಾಗದು. ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ನರ್ಸಿಂಗ್ ಕಾಲೇಜುಗಳು ಹಾಗೂ ಶುಶ್ರೂಷಕರಿದ್ದಾರೆ. ದೂರದ ಊರುಗಳಲ್ಲಿರುವ ನರ್ಸ್‌ಗಳ ಸೇವೆ ಗುರುತಿಸಿದರೆ, ಆ ಪ್ರದೇಶ ದಲ್ಲಿರುವ ನರ್ಸ್‌ಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುವುದು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Dr. K. Sudhakar), ಮಾಜಿ ಶಾಸಕ ಇವಾನ್ ನೆಗ್ಲಿ ಮತ್ತಿತರರು ಉಪಸ್ಥಿತರಿದ್ದರು.