Home News Jasprit Bumrah ಸಾಧನೆ: ICC ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Jasprit Bumrah ಸಾಧನೆ: ICC ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Jasprit Bumrah

Dubai: ಭಾರತದ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) 2024ರ ಸರ್ ಗ್ಯಾರಿ ಸೋಬರ್ಸ್ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ ಗೆಲ್ಲುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಕಳೆದ ವರ್ಷ ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಬುಮ್ರಾ, ಇತರ ಮೂವರು ಕ್ರಿಕೆಟಿಗರನ್ನು ಹಿಂದಿಕ್ಕಿ ಈ ಗೌರವವನ್ನು ಪಡೆದಿದ್ದಾರೆ.

2024ರಲ್ಲಿ 13 ಟೆಸ್ಟ್ ಪಂದ್ಯಗಳಲ್ಲಿ 71 ವಿಕೆಟ್ ಹಾಗೂ 8 ಟಿ20 ಪಂದ್ಯಗಳಲ್ಲಿ 15 ವಿಕೆಟ್ ಕಬಳಿಸಿರುವ ಬುಮ್ರಾ, ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಟಿ20 ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಅವರು, ಆಸ್ಟ್ರೇಲಿಯಾ ಪ್ರವಾಸದಲ್ಲಿ 5 ಟೆಸ್ಟ್ ಪಂದ್ಯಗಳಲ್ಲಿ 31 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು.

ಐಸಿಸಿ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ ಗೆಲ್ಲಿದ ಭಾರತದ ಮೊದಲ ವೇಗಿ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ರಾಹುಲ್ ದ್ರಾವಿಡ್ (2004), ಸಚಿನ್ ತೆಂಡುಲ್ಕರ್ (2010), ಆರ್. ಅಶ್ವಿನ್ (2016), ವಿರಾಟ್ ಕೊಹ್ಲಿ (2017, 2018) ಈ ಗೌರವವನ್ನು ಪಡೆದಿದ್ದಾರೆ.

2024ರ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಗೆಲುವಿನ ಜೊತೆಗೆ, ಅವರು ಟೆಸ್ಟ್ ಹಾಗೂ ಟಿ20 ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗಾಗಿ ಆಯ್ಕೆಯಾಗಿದರೂ, ಬೆನ್ನು ನೋವಿನ ಸಮಸ್ಯೆಯಿಂದ ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಿಕಿತ್ಸೆಗಾಗಿ ಅವರು ನ್ಯೂಜಿಲೆಂಡ್ ಗೆ ತೆರಳಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version