Search
WhatsApp alerts

Home › News

Joe Biden ಪ್ರಾಸ್ಟೇಟ್ ಕ್ಯಾನ್ಸರ್‌ ಖಚಿತ, ಆರೋಗ್ಯ ಗಂಭೀರ

administrator · Published

Former US President Joe Biden

ಅಮೆರಿಕದ 82 ವರ್ಷದ ಮಾಜಿ ಅಧ್ಯಕ್ಷ ಜೋ ಬೈಡನ್ (Former US President Joe Biden) ಅವರಿಗೆ ಪ್ರಾಸ್ಟೇಟ್ ಕ್ಯಾನ್ಸರ್ ದೃಢಪಟ್ಟಿದ್ದು, ಕ್ಯಾನ್ಸರ್ ಮೂಳೆಗಳಿಗೆ ಹರಡಿದೆ. ಈ ಕುರಿತು ಜೋ ಬೈಡನ ಅವರ ಕಚೇರಿ ಮೇ 19 ರಂದು ಅಧಿಕೃತವಾಗಿ ಮಾಹಿತಿ ನೀಡಿದೆ.

ಅಮೆರಿಕದ ಪ್ರಸ್ತುತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಅವರು ಬೈಡನಿಗೆ ಶೀಘ್ರ ಚೇತರಿಕೆಗಾಗಿ ಶುಭಾಶಯಗಳನ್ನು ವ್ಯಕ್ತಪಡಿಸಿದ್ದಾರೆ. 2021 ರಿಂದ 2025 ರವರೆಗೆ ಅಮೆರಿಕ ಅಧ್ಯಕ್ಷರಾಗಿದ್ದ ಬೈಡನ್, 2024 ರಲ್ಲಿ ಆರೋಗ್ಯ ಕಾರಣಗಳಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧರಿಸಿದ್ದರು.

ಪ್ರಾಸ್ಟೇಟ್ ಕ್ಯಾನ್ಸರ್ ಪುರುಷರಲ್ಲಿ ಚರ್ಮದ ಕ್ಯಾನ್ಸರ್ ನಂತರ ಎರಡನೇ ಸಾಮಾನ್ಯ ಕ್ಯಾನ್ಸರ್ ಆಗಿದ್ದು, ಕೆಲವೊಮ್ಮೆ ಈ ಕ್ಯಾನ್ಸರ್ ನಿಧಾನವಾಗಿ ಬೆಳೆಯುತ್ತದೆ ಮತ್ತು ವರ್ಷಗಳ ನಂತರ ಅದರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ಆದರೆ ಕೆಲವು ಸಂದರ್ಭಗಳಲ್ಲಿ ಇದು ವೇಗವಾಗಿ ಹರಡುತ್ತದೆ ಮತ್ತು ಮೂಳೆಗಳಂತಹ ದೇಹದ ಇತರ ಭಾಗಗಳನ್ನು ತಲುಪುತ್ತದೆ. ಬೈಡನ್ ಪ್ರಕರಣದಲ್ಲೂ ಕ್ಯಾನ್ಸರ್ ಮೂಳೆಗಳಿಗೆ ಹರಡಿದ್ದು, ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page