Bengaluru : ಜಯದೇವ ಹೃದ್ರೋಗ ಸಂಸ್ಥೆ (Jayadeva Institute of Cardiovascular Sciences and Research) ಸಹಯೋಗದಲ್ಲಿ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ (K C General Hospital) ನಿರ್ಮಿಸಲಾಗುತ್ತಿರುವ ಹೃದಯ ಚಿಕಿತ್ಸಾ ಕೇಂದ್ರಕ್ಕೆ ಬುಧವಾರ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ (C. N. Ashwath Narayan) ಭೇಟಿ ನೀಡಿ ಹೃದಯ ಚಿಕಿತ್ಸಾ ಕೇಂದ್ರ, 50 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ ” ತಾಯಿ ಮತ್ತು ಮಕ್ಕಳ ಶುಶ್ರೂಷೆಗೆ 200 ಹಾಸಿಗೆಗಳ ಆಸ್ಪತ್ರೆ ನಿರ್ಮಿಸುವ ಯೋಜನೆಯಿದೆ.ನಿಮ್ಹಾನ್ಸ್ ಸಹಯೋಗದಲ್ಲಿ ಆಸ್ಪತ್ರೆಯ ಆವರಣದಲ್ಲೇ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸಲಾಗುವುದು. ಸಾರ್ವಜನಿಕರಿಗೆ ಕೈಗೆಟು ಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಲಿದೆ” ಎಂದು ಹೇಳಿದರು.
ನಂತರ ಮಣಿಪಾಲ್ ಆಸ್ಪತ್ರೆ ನೆರವಿನೊಂದಿಗೆ ಬಿಬಿಎಂಪಿ ಕಟ್ಟಡದಲ್ಲಿ ಸ್ಥಾಪನೆಯಾಗಲಿರುವ ಹೈಟೆಕ್ ಪ್ರಯೋಗಾಲಯದ ಪ್ರಗತಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರಿಂದ ವೈದ್ಯರ ಲಭ್ಯತೆ, ಕೆಲಸದ ಅವಧಿಯಲ್ಲಿ ಇರುವ ಸಿಬ್ಬಂದಿ ಸಂಖ್ಯೆ, ಆರೋಗ್ಯ ಸೇವೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಚಿವರು ಚರ್ಚಿಸಿದರು.