back to top
23.2 C
Bengaluru
Wednesday, February 25, 2026
HomeKarnatakaChikkaballapuraಕಾಳಿಕಾಂಬ ಕಮಠೇಶ್ವರ ಹೂವಿನ ಕರಗ

ಕಾಳಿಕಾಂಬ ಕಮಠೇಶ್ವರ ಹೂವಿನ ಕರಗ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲ CVV ಸರ್ಕಲ್ ಬಳಿಯ ಕಾಳಿಕಾಂಬ ಕಮಠೇಶ್ವರ (Kalikamba Kamateshwara Karaga) ದೇವಾಲಯದ 10ನೇ ವರ್ಷದ ಹೂವಿನ ಕರಗ ಮಹೋತ್ಸವ ಶನಿವಾರ ರಾತ್ರಿಯಿಂದ ಭಾನುವಾರ ರಾತ್ರಿಯವರೆಗೂ ಅದ್ದೂರಿಯಾಗಿ ನಡೆಸಲಾಯಿತು. ಕರಗದ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗಿತ್ತು.

ಕರಗದ ಪೂಜಾರಿಯಾಗಿದ್ದ ವಾಪಸಂದ್ರದ ಎಂ.ಅಂಜಿತ್ ಕುಮಾರ್ ಅವರು ಹೂವಿನ ಕರಗ ಹೊತ್ತು ರಾತ್ರಿ 10ರ ಸುಮಾರಿಗೆ ಒಂದು ಕೈಯಲ್ಲಿ ಕತ್ತಿ ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳು ಮೊಳಗಿದವು. ನಗರದ ವಿವಿಧೆಡೆ ಕರಗಧಾರಿಗಳ ಸ್ವಾಗತಕ್ಕೆ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.

ದೇವಾಲಯದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ನಡೆದ ಕರಗದ ಪೂಜಾರಿ ನೃತ್ಯವನ್ನು ಅಪಾರ ಭಕ್ತರು ಕಣ್ತುಂಬಿಕೊಂಡರು.

For Daily Updates WhatsApp ‘HI’ to 7406303366

The post ಕಾಳಿಕಾಂಬ ಕಮಠೇಶ್ವರ ಹೂವಿನ ಕರಗ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page