Home Entertainment ಯುದ್ಧ ಪರಿಸ್ಥಿತಿಯಲ್ಲಿ Film ಕಾರ್ಯಕ್ರಮ ಮುಂದೂಡಿದ Kamal Haasan

ಯುದ್ಧ ಪರಿಸ್ಥಿತಿಯಲ್ಲಿ Film ಕಾರ್ಯಕ್ರಮ ಮುಂದೂಡಿದ Kamal Haasan

Kamal Haasan

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ, ತಮಿಳಿನ ಪ್ರಸಿದ್ಧ ನಟ ಕಮಲ್ ಹಾಸನ್ (Kamal Haasan) ಅವರು ತಮ್ಮ ಹೊಸ ಸಿನಿಮಾದ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ಭಾರತೀಯ ಸೈನಿಕರು ಪಾಕಿಸ್ತಾನದ ಭಯೋತ್ಪಾದನಾ ಶಿಬಿರಗಳು ಮತ್ತು ಸೇನಾ ನೆಲೆಗಳ ಮೇಲೆ ಸತತ ದಾಳಿಗಳನ್ನು ನಡೆಸುತ್ತಿರುವ ಸಂದರ್ಭದಲ್ಲಿ, ದೇಶದಾದ್ಯಂತ ಸೈನಿಕರ ಪರವಾಗಿ ಪ್ರಾರ್ಥನೆಗಳು ನಡೆಯುತ್ತಿವೆ.

ಈ ಹಿನ್ನಲೆಯಲ್ಲಿ, ಮೇ 16ರಂದು ನಿಗದಿಯಾಗಿದ್ದ ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಕಮಲ್ ಹಾಸನ್ ಮುಂದೂಡಿದ್ದಾರೆ. ದೇಶದ ಗಡಿಯಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಸೈನಿಕರು ಶೌರ್ಯದಿಂದ ಹೋರಾಟ ನಡೆಸುತ್ತಿರುವ ಈ ಸಂದರ್ಭದಲ್ಲಿ ಸಂಭ್ರಮಾಚರಣೆ ಬೇಡವೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಮಲ್ ಹಾಸನ್ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಈ ಸಂಕಟದ ಸಮಯದಲ್ಲಿ ನಾವು ಎಲ್ಲರೂ ಒಗ್ಗಟ್ಟು ತೋರಿಸಬೇಕು. ನಮ್ಮ ಸೈನಿಕರು ಮತ್ತು ಅವರ ಕುಟುಂಬಗಳಿಗೆ ನಮ್ಮ ಸಂಪೂರ್ಣ ಬೆಂಬಲ ಮತ್ತು ಪ್ರಾರ್ಥನೆಗಳು ಇರಬೇಕು” ಎಂದು ತಿಳಿಸಿದ್ದಾರೆ.

‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆಗೆ ತ್ರಿಷಾ ಕೃಷ್ಣನ್ ಮತ್ತು ಸಿಂಭು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ನಿರ್ದೇಶನ ಮಾಡಿರುವುದು ಮಣಿರತ್ನಂ ಮತ್ತು ಸಂಗೀತ ನೀಡಿರುವುದು ಎಆರ್ ರೆಹಮಾನ್.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version