Home Karnataka Kannada Rajyotsava: ಕನ್ನಡ ಬಾವುಟ ಹಾರಿಸೋದು ಕಡ್ಡಾಯ

Kannada Rajyotsava: ಕನ್ನಡ ಬಾವುಟ ಹಾರಿಸೋದು ಕಡ್ಡಾಯ

510
Kannada Flag hoisting Mandatory on Rajyotsava

ಪ್ರತಿ ನವೆಂಬರ್‌ 1ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸುವ ಜೊತೆಗೆ ತಿಂಗಳಿಡೀ ಹಬ್ಬದ ರೀತಿಯಲ್ಲೇ ಸಂಭ್ರಮಿಸಲಾಗುತ್ತದೆ. ಈ ಬಾರಿ ರಾಜ್ಯ ಸರ್ಕಾರವು ಕನ್ನಡ ರಾಜ್ಯೋತ್ಸವಕ್ಕೆ ಹೊಸ ನಿಯಮವನ್ನು ಕಡ್ಡಾಯಗೊಳಿಸಿ ಅರ್ಥಪೂರ್ಣ ಆಚರಣೆಗೆ ಕರೆ ಕೊಟ್ಟಿದೆ.

ಈ ಬಗ್ಗೆ ಮಾಹಿತಿ ನೀಡಿರುವ DCM ಡಿ.ಕೆ.ಶಿವಕುಮಾರ್‌ (DK Shivakumar), ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ.

ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, IT BT ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಹೊರಗಿನವರೇ ಇದ್ದಾರೆ. ಅವರೂ ನಮ್ಮ ಕನ್ನಡವನ್ನು ಕಲಿತುಕೊಳ್ಳಬೇಕು.

ರಾಜ್ಯೋತ್ಸವದಂದು ಕನ್ನಡಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ನಮ್ಮ ರಾಷ್ಟ್ರಧ್ವಜದ ರೀತಿಯಲ್ಲೇ ಕನ್ನಡದ ಬಾವುಟವನ್ನು ಗೌರವಿಸಬೇಕು. ಈ ಮೂಲಕ ಕನ್ನಡಕ್ಕೆ ಶ್ರದ್ಧೆ ಹಾಗೂ ಗೌರವವನ್ನು ತೋರಬೇಕು ಎಂದು ಹೇಳಿದ್ದಾರೆ.

ಈ ಹಿಂದೆಯು ಇದರ ಬಗ್ಗೆ ಮಾಹಿತಿ ನೀಡಿದ್ದ ಡಿಕೆಶಿ, ರಾಜ್ಯಕ್ಕೆ ಜನ ಎಲ್ಲಿಂದಾದರೂ ಬಂದಿರಲಿ, ಈ ನವೆಂಬರ್ 1ರಂದು ಕರ್ನಾಟಕದ ಹೆಮ್ಮೆಯ ಧ್ವಜವನ್ನು ಕಡ್ಡಾಯವಾಗಿ ಹಾರಿಸಲೇಬೇಕು.

ನಮಗೆ ಕನ್ನಡ ದಿನಾಚರಣೆ ಮುಖ್ಯ. ಆ ದಿನ ಎಲ್ಲ ಸಂಸ್ಥೆಗಳಲ್ಲಿ, ಖಾಸಗಿ ಕಂಪನಿಗಳು ಈ ನೆಲದ ಕನ್ನಡ ಧ್ವಜವನ್ನು ಹಾರಿಸುವುದು ಕಡ್ಡಾಯ ಎಂದಿದ್ದರು.

ಇದರ ನಡುವೆ ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಯಾವ ಸಂಘಟನೆಗಳೂ ಯಾರ ಮೇಲೂ ಒತ್ತಡ ತರಬಾರದು. ರಾಜ್ಯೋತ್ಸವ ಆಚರಣೆ ಬಗ್ಗೆ ರಾಜ್ಯ ಸರ್ಕಾರವೇ ಆದೇಶ ನೀಡುತ್ತಿದೆ.

ಅದರ ಅನ್ವಯವೇ ರಾಜ್ಯೋತ್ಸವ ಆಚರಣೆ ನಡೆಯಲಿದೆ ಎಂದು ಕಿವಿಮಾತು ಹೇಳಿದ್ದರು.

ಒಂದು ವೇಳೆ ಸಂಸ್ಥೆಗಳು ಕನ್ನಡ ಬಾವುಟ ಹಾರಿಸದಿದ್ದರೆ, ಅಂತಹ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸಲಿದೆ.

ಈ ವಿಚಾರವಾಗಿ ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳಿಗೆ ಗಲಾಟೆ ಮಾಡಿ ಹೆದರಿಸುವ ಕೆಲಸಗಳನ್ನು ಮಾಡಬಾರದು ಎಂದು ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದರು. ಈ ನಿಯಮ ಎಷ್ಟರಮಟ್ಟಿಗೆ ಪಾಲನೆಯಾಗುತ್ತೆ ಎನ್ನುವುದು ರಾಜ್ಯೋತ್ಸವದಂದು ಗೊತ್ತಾಗಲಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page