back to top
33.4 C
Bengaluru
Saturday, March 15, 2025
HomeKarnatakaChikkaballapuraಕನ್ನಡ ಜ್ಯೋತಿ ರಥಕ್ಕೆ ಜಿಲ್ಲೆಯಾದ್ಯಂತ ಅದ್ದೂರಿ ಸ್ವಾಗತ

ಕನ್ನಡ ಜ್ಯೋತಿ ರಥಕ್ಕೆ ಜಿಲ್ಲೆಯಾದ್ಯಂತ ಅದ್ದೂರಿ ಸ್ವಾಗತ

- Advertisement -
- Advertisement -

Chikkaballapur : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharath Kannada Sahitya Sammelana) ಅಂಗವಾಗಿ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು (Kannada Jyothi Ratha Yatre) ಬುಧವಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಆರಂಭವಾದ ಕನ್ನಡ ರಥದ ಮೆರವಣಿಗೆಯು ಬಿ.ಬಿ ರಸ್ತೆ, ಶಿಡ್ಲಘಟ್ಟ ವೃತ್ತ, ಎಂ.ಜಿ ರಸ್ತೆಯ ಮೂಲಕ ಡಿವೈಎಸ್‌ಪಿ ಕಚೇರಿ, ಅಂಬೇಡ್ಕರ್ ಭವನ, ಉಪವಿಭಾಗಾಧಿಕಾರಿ ಕಚೇರಿಯ ಮುಂಭಾಗವರೆಗೂ ಸಾಗಿತು. ಪೂರ್ಣಕುಂಭ ಕಳಶದೊಂದಿಗೆ ಮಹಿಳೆಯರು, ಜಾನಪದ ಕಲಾತಂಡಗಳು, ಸಾರ್ವಜನಿಕರು ಕನ್ನಡ ರಥಕ್ಕೆ ಪುಷ್ಪನಮನ ಸಲ್ಲಿಸಿ ಶುಭ ಕೋರಿದರು.

ಶಿಡ್ಲಘಟ್ಟ :

Kannada Jyothi Ratha Yatre 2024 Sidlaghatta

ಶಿಡ್ಲಘಟ್ಟ ತಾಲ್ಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಬಿ.ಎನ್.ರವಿಕುಮಾರ್, ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ಹೂವಿನ ಹಾರ ಹಾಕಿ ಅದ್ದೂರಿಯಾಗಿ ಬರ ಮಾಡಿಕೊಂಡರು.

ಚಿಂತಾಮಣಿ :

Kannada Jyothi Ratha Yatre 2024 Chintamani

ಚಿಂತಾಮಣಿ ನಗರದ ಚೇಳೂರು ವೃತ್ತದಲ್ಲಿ ಕನ್ನಡ ಜ್ಯೋತಿ ರಥವನ್ನು ತಹಶೀಲ್ದಾರ್ ಸುದರ್ಶನ ಯಾದವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವಿ.ಶ್ರೀನಿವಾಸ್ ಹಾಗೂ ಪದಾಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಅಶೋಕ ಕುಮಾರ್ ಮತ್ತು ಪದಾಧಿಕಾರಿಗಳು ಕನ್ನಡಪರ ಸಂಘಟನೆಗಳ ಪದಾಧಿಕಾರಿ ಗಳು ಅದ್ದೂರಿಯಾಗಿ ಸ್ವಾಗತಿಸಿದರು.

ಚೇಳೂರು :

Kannada Jyothi Ratha Yatre 2024 Chelur

ಚೇಳೂರು ತಾಲ್ಲೂಕು ಆಡಳಿತದ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖರು, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ತಾಲ್ಲೂಕು ಹೋರಾಟಗಾರರು ಸೇರಿ ಸಂಘಸಂಸ್ಥೆಗಳ ಮುಖಂಡರು, ಶಿಕ್ಷಕರು, ಸ್ಥಳೀಯರು, ಶಾಲಾ ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನ್ನಡ ಜ್ಯೋತಿ ರಥವನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

For Daily Updates WhatsApp ‘HI’ to 7406303366

The post ಕನ್ನಡ ಜ್ಯೋತಿ ರಥಕ್ಕೆ ಜಿಲ್ಲೆಯಾದ್ಯಂತ ಅದ್ದೂರಿ ಸ್ವಾಗತ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page