Bengaluru: ಮಾರ್ಚ್ 3ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತದೆ. ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಬಜೆಟ್ (Karnataka Budget) ಮಂಡಿಸಲಿದ್ದಾರೆ. ಬಳಿಕ 3 ದಿನಗಳ ಕಾಲ ರಾಜ್ಯಪಾಲರ ಭಾಷಣದ ಬಗ್ಗೆ ಚರ್ಚೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಪೂರ್ವಭಾವಿ ಸಭೆಗಳನ್ನು ನಡೆಸಿದ್ದು, ಅವುಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ಫೆ.17) ರೈತರು ಮತ್ತು ರೈತ ಸಂಘಗಳೊಂದಿಗೆ ಸಭೆ ನಡೆಸಿ, “ನಾನು ಸದಾ ರೈತ ಕುಲದ ಪರ ಆಗಿದ್ದೇನೆ. ರೈತರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಕೃಷಿಯಲ್ಲಿಯೇ ಹೆಚ್ಚು ಉದ್ಯೋಗ ಇರುವುದರಿಂದ ರೈತರ ಬೇಡಿಕೆಗಳಿಗೆ ನಾವು ಪ್ರಥಮ ಆದ್ಯತೆಯನ್ನು ನೀಡುತ್ತೇವೆ” ಎಂದು ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, “ಕೃಷಿಕರ ಹಿತಕ್ಕಾಗಿ ಕರ್ನಾಟಕ ಸರ್ಕಾರ ಸದಾ ಪ್ರಯತ್ನಿಸುತ್ತಿದೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರವಾಗಿದೆ. ನಾವು ಕೈಗೊಳ್ಳಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.
ಮೆಟ್ರೋ ರೈಲಿನ ದರ ನಿಗದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಕಮಿಟಿಯನ್ನು ರಚಿಸಿದ್ದು, ಇದರಲ್ಲಿ ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.