Madikeri, Kodagu : ಮುಖ್ಯಮಂತ್ರಿ Basavaraj Bommai ಅವರು ಬಜೆಟಿನಲ್ಲಿ ಪ್ರಕಟಿಸಿದ ಹಾಗೆ ರಾಜ್ಯದ 33 ಲಕ್ಷ ಹೊಸ ರೈತರಿಗೆ (Farmers) ಹಾಗೂ ಸ್ವಸಹಾಯ ಗುಂಪುಗಳಿಗೆ 24 ಸಾವಿರ ಕೋಟಿ ಸಾಲ (Loan) ನೀಡಲು ಸರ್ಕಾರ (Karnataka Government) ಮುಂದಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಸೋಮವಾರ ಮಡಿಕೇರಿಯ ಕುಶಾಲನಗರದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಜಾರಿಯಾಗುವ ಸಂಭವವಿದ್ದು, ಇದಕ್ಕೆ ಇಲಾಖೆ ಎಲ್ಲಾ ರೀತಿಯ ಅಗತ್ಯತೆಯನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ನೀಡಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.