Bengaluru / Bangalore : ಸಿದ್ದರಾಮಯ್ಯ (Siddaramaiah) ರವರ ಅಡಳಿತ ಅವಧಿಯಲ್ಲಿ ಲೋಕಾಯುಕ್ತಕ್ಕೆ (Karnataka Lokayukta ) ಪರ್ಯಾಯವಾಗಿ ಸ್ಥಾಪಿಸಿದ ‘ಭ್ರಷ್ಟಾಚಾರ ನಿಗ್ರಹ ದಳ (Anti-Corruption Bureau) (ACB) ಅನ್ನು ರದ್ದುಪಡಿಸಿ (Abolishes) ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶವನ್ನು ಹೊರಡಿಸಿದೆ.
ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ (Karnataka Lokayukta ) ಪರ್ಯಾಯವಾಗಿ ACB ರಚಿಸಿದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾರ ನ್ಯಾಯಪೀಠವು ರಾಜ್ಯ ಸರ್ಕಾರ ಎಸಿಬಿ ರಚನೆ ಮಾಡಿ ಹೊರಡಿಸಿದ್ದಂತ ಆದೇಶವನ್ನು ರದ್ದು ಪಡಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿತು.
ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶವನ್ನು ಹೊರಡಿಸಿದೆ ನ್ಯಾಯಪೀಠ ಎಸಿಬಿಯ ಎಲ್ಲಾ ಪ್ರಕರಣಗಳೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಬೇಕು ಎಂಬುದಾಗಿಯೂ ಆದೇಶದಲ್ಲಿ ತಿಳಿಸಿದೆ.